ರಾಮನಗರ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಬೆಂಗಳೂ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ.
ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12 ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.
ಇದನ್ನೂ ಓದಿ:ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ : ನಾಳೆಯಿಂದ ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ
ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾದ ಬೆನ್ನೆಲ್ಲೇ ಪ್ರಸ್ತಾವದ ಕುರಿತ ಚರ್ಚೆ ಮುನ್ನೆಲೆಗೆ ಬಂದಿತ್ತು. ಉನ್ನತ ಮಟ್ಟದ ಅಧಿಕಾರಿಗಳ ಹಂತದಲ್ಲಿ ಪರಿಶೀಲನೆ ನಡೆದಿತ್ತು.ಕಡೆಗೂ ಅಧಿಕಾರಿಗಳು ಪ್ರಸ್ತಾವಕ್ಕೆ ಹಸಿರು ನಿಶಾನೆ ತೋರಿದ್ದು ಗೆಜೆಟ್ ಅಧಿಸೂಚನೆಯು ಆಗಿದೆ. ಇತ್ತೀಚೆಗಷ್ಟೇ ಪ್ರಾಧಿಕಾರದ ತಜ್ಞರ ಸಮಿತಿ ಎಕ್ಸ್‌ಪ್ರೆಸ್ ವೇಗ ಭೇಟಿ ನೀಡಿ ಸುರಕ್ಷತೆ ಮತ್ತು ಅಪಘಾತ ತಡೆ ಕ್ರಮಗಳ ಕುರಿತು ಪರಿಶೀಲನೆ ನಡೆಸುತ್ತು.
ಮೋಟಾರ್ ಸೈಕಲ್‌ಗಳು (ಸ್ಕೂಟರ್ ಹಾಗೂ ಇತರ ದ್ವಿಚಕ್ರ ವಾಹನ),ಮೂರು ಚಕ್ರದ ವಾಹನಗಳು(ಇ ಗಾಡಿ ಇ ರಿಕ್ಷಾ) ಮೋಟಾರ್ ರಹಿತ ವಾಹನಗಳು,ಟ್ರೇಲರ್‌ಗಳ ಸಹಿತ ಅಥವಾ ರಹಿತವಾದ ವಿಶೇಷ ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಕ್ವಾಡಿ ಸೈಕಲ್‌ಗಳಿಗೆ ನಿಷೇಧ ಹೇರಲಾಗಿದೆ.