ರಾಮನಗರ: ಚುನಾವಣಾ ಆಯೋಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತಿಸೂಕ್ಷ್ಮ ಕ್ಷೇತ್ರ ಎಂದು ಘೋಷಣೆ ಮಾಡಿದೆ. ಈ ಲೋಕಸಭಾ ಕ್ಷೇತ್ರದಲ್ಲಿ ನ್ಯಾಯಸಮತ್ತವಾಗಿ ಚುನಾವಣೆ ನಡೆಯಬೇಕಿದೆ.
ಈ ಕ್ಷೇತ್ರದಲ್ಲಿ ಪ್ರಬಲರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಅತಿಸೂಕ್ಷ್ಮ ಕ್ಷೇತ್ರ ಅಂತ ಪರಿಗಣಿಸಲು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಏಜೆಂಟ್ ಆಗಿರುವ ಪದ್ಮನಾಭ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಆದೇಶ ಹೊರಡಿಸಿದ್ದು, ಸದರಿ ಪತ್ರವನ್ನ ರಾಮನಗರ ಜಿಲ್ಲಾಧಿಕಾರಿಗೆ ರವಾನೆ ಮಾಡಲಾಗಿದೆ.
ಇದನ್ನು ಓದಿ : ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿಗೆ ಗಾಣಿಗ ಸಮುದಾಯ ಬೆಂಬಲ
ಏಪ್ರಿಲ್ 10ರಂದು ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಗ್ರಾಮಾಂತರ ಕ್ಷೇತ್ರದಲ್ಲಿ ನ್ಯಾಯಸಮ್ಮತ ಚುನಾವಣೆಗಾಗಿ ಹೆಚ್ಚು ಅರೆಸೇನಾ ಪಡೆ ನಿಯೋಜನೆ ಮಾಡಲು ಮನವಿ ಮಾಡಿತ್ತು. ಇದರ ಬೆನಲ್ಲೇ ಪದ್ಮನಾಭ್ ಅವರು ಕೂಡ ಏಪ್ರಿಲ್ 06ರಂದು ಪತ್ರ ಬರೆದು ಮನವಿ ಮಾಡಿದ್ದರು. ಈ ಹಿನ್ನೆಲೆ ಕ್ಷೇತ್ರದಲ್ಲಿ ಹೆಚ್ಚಿನ ಭದ್ರತೆ ವಹಿಸಲು ಚುನಾವಣಾ ಆಯೋಗ ಆದೇಶ ನೀಡಿದೆ.
ಅಂದಹಾಗೇ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಸ್ಪರ್ಧೆ ಮಾಡಿದ್ದಾರೆ. ಇತ್ತ ಎನ್ಡಿಎ ಅಭ್ಯರ್ಥಿಯಾಗಿ ಡಾ ಸಿಎನ್ ಮಂಜುನಾಥ್ ಅವರು ಕಣಕ್ಕೆ ಇಳಿದಿದ್ದಾರೆ.
ಇದನ್ನು ನೋಡಿ : ಕೋಮುವಾದಿಗಳನ್ನು ಸೋಲಿಸುವುದು ಜಾಗೃತ ನಾಗರಿಕರ ಜವಾಬ್ದಾರಿ – ಬಂಜಗೆರೆ ಜಯಪ್ರಕಾಶ್ Janashakthi Media