ಬಿಎಂಟಿಸಿ ಬಸ್ಸು ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ಕಳೆದ ಹದಿಮೂರು ದಿನಗಳ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ಸು ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಶಿಲ್ಪ(22) ಎಂಬ ವಿದ್ಯಾರ್ಥಿನಿ ಇಂದು(ಅಕ್ಟೋಬರ್‌ 23) ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದಿದ್ದಾರೆ.

ಶಿಲ್ಪಾ ಬನ್ನೇರು ಘಟ್ಟದ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಕಳೆದ 14 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸಿದರು. ಆದರೆ, ಇಂದು ಬೆಳಗಿನ ಜಾವ 4 ಘಂಟೆ ಸುಮಾರಿಗೆ ಚಿಕಿತ್ಸೆ ಫಲಕರಿಸದೇ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕೋಲಾರದ ಬಂಗಾರಪೇಟೆಗೆ ರವಾನೆ ಮಾಡಲಾಗಿದೆ.

ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದಳು. ಶಿಲ್ಪ ಬೆಂಗಳೂರು ವಿಶ್ವವಿದ್ಯಾಲಯದ ಎಂಎಸ್ಸಿ ಗಣಿತ ವಿಷಯದ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರು, ಕಳೆದ ಅಕ್ಟೋಬರ್‌ 10ರ ಬೆಳಗ್ಗೆ 10.30ರ ಸುಮಾರಿಗೆ ಜ್ಞಾನಭಾರತಿ ಆವರಣದ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ಸಿಗಾಗಿ ಕಾಯುತ್ತಿದ್ದರು.

ಅಕ್ಟೋಬರ್ 10ರಂದು ಬಸ್ಸು ಹತ್ತುವಾಗ ವಿದ್ಯಾರ್ಥಿನಿ ಶಿಲ್ಪಾ ಕೆಳಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಬಸ್ಸು ಚಲಿಸಿ ಅಪಘಾತ ಸಂಭವಿಸಿತು. ಇದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿದ್ಯಾರ್ಥಿನಿ ಅಪಘಾತದ ಬಳಿಕ ಬೆಂಗಳೂರು ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ದೊಡ್ಡ ಮಟ್ಟದ ಪ್ರತಿಭಟನೆ ಮಾಡಿದ್ದರು. ವಿಶ್ವವಿದ್ಯಾಲಯದ ಎಲ್ಲಾ ದ್ವಾರಗಳಿಗೂ ಬೀಗ ಹಾಕಿ ಧರಣಿ ನಡೆಸಿದ್ದರು. ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

ಶಿಲ್ಪಾ ನಿಧನದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಯೂನಿಯನ್ ನ ಚಂದ್ರು ಪೆರಿಯರ್ ಮಾತನಾಡಿ, ಸರ್ಕಾರ ಮಾತು ಕೊಟ್ಟಿತ್ತು. ತಾತ್ಸರ ಮಾಡೋದು ಬೇಡ. ಶಿಲ್ಪಾಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ವೈದ್ಯಕೀಯ ಖರ್ಚು, ಹಾಗೂ ಕುಟುಂಬಕ್ಕೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ಸರ್ಕಾರ ತಾತ್ಸರ ಮಾಡಿದೆ. ಇವರೆಗೆ ವೈದ್ಯಕೀಯ ಖರ್ಚು ಬಿಎಂಟಿಸಿ ಆಡಳಿತ ನೋಡಿಕೊಂಡಿದೆ. ನಮ್ಮ ಭರವಸೆಗೆ ಸ್ಪಂದಿಸದಿದ್ದರೇ, ಹೋರಾಟಕ್ಕೆ ಇಳಿಯುತ್ತೇವೆ. ಅಧ್ಯಾಪಕರ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *