ಬೆಂಗಳೂರು | ಪ್ರತಿದಿನ 500 ನಾಲ್ಕು ಚಕ್ರದ ವಾಹನಗಳು & 1,300 ದ್ವಿಚಕ್ರ ವಾಹನಗಳು ನೋಂದಣಿ!

ಬೆಳಗಾವಿ: ಬೆಂಗಳೂರಿನಲ್ಲಿ ಪ್ರತಿದಿನ 1,300 ದ್ವಿಚಕ್ರ ವಾಹನಗಳು ಮತ್ತು ಸುಮಾರು 490 ನಾಲ್ಕು ಚಕ್ರದ ವಾಹನಗಳು ನೋಂದಣಿಯಾಗುತ್ತಿದ್ದು, ನಗರದ ಜೀವನದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಗುರುವಾರ ಹೇಳಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಹಾಗೂ ಇದನ್ನು ಹೇಗೆ ಪರಿಹರಿಸಬೇಕೆಂದು ಈಗಾಗಲೇ ಜನರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸಂಚಾರ ಸುಗಮಗೊಳಿಸುವುದು ಮತ್ತು ನಗರವನ್ನು ಸುರಕ್ಷಿತಗೊಳಿಸುವ ಕುರಿತು ಬಿಜೆಪಿ ಎಂಎಲ್‌ಸಿಗಳಾದ ಭಾರತಿ ಶೆಟ್ಟಿ ಮತ್ತು ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಗರದಲ್ಲಿ 1.30 ಕೋಟಿ ಜನರಿದ್ದರೆ, ವಾಹನಗಳ ಸಂಖ್ಯೆ ಸುಮಾರು 1.16 ಕೋಟಿ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯಲ್ಲೇ ಹೆಚ್ಚು!

ನಗರದಲ್ಲಿ ವೇಗವಾಗಿ ಹೆಚ್ಚುತ್ತಿರುವ ಮಾನವ ಮತ್ತು ವಾಹನ ಜನಸಂಖ್ಯೆಯು ನೀರು, ಸಂಚಾರ ಮತ್ತು ಹಸಿರಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಸವಾಲಾಗಿದೆ ಎಂದು ಅವರು ಹೇಳಿದ್ದು, “ಈ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಡಿಕೆಶಿ ಹೇಳಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ಈಗಾಗಲೇ ರಾಜ್ಯದ ಜನರಿಂದ ಹಾಗೂ ವಿದೇಶದಲ್ಲಿ ನೆಲೆಸಿರುವವರಿಂದ 70,000 ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ತಜ್ಞರಿಂದಲೂ ಸಲಹೆಗಳನ್ನು ಪಡೆದಿರುವುದಾಗಿ ಡಿಕೆಶಿ ತಿಳಿಸಿದ್ದಾರೆ.

ಈ ವೇಳೆ ಹಾಜರಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಜನರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸುವ ಮತ್ತು ಅಪರಾಧಿಗಳ ಮೇಲೆ ನಿಗಾ ಇಡುವ ಕುರಿತು, ಸರ್ಕಾರ ಈಗಾಗಲೇ ನಗರದಲ್ಲಿ ಸುಮಾರು 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು

ಇದನ್ನೂ ಓದಿ: ಸಂಸತ್ ಭದ್ರತಾ ಲೋಪ | ಯಾರು ಈ 6 ಆರೋಪಿಗಳು?

ಮುಂದಿನ ದಿನಗಳಲ್ಲಿ ನಗರದಲ್ಲಿ ನಿರ್ಭಯ ಯೋಜನೆಯಡಿ ಸುಮಾರು 2,500 ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೇಳಿದ ಅವರು, “ಸಾರ್ವಜನಿಕ ದಟ್ಟಣೆ ಹೆಚ್ಚಿರುವ ಶಿಕ್ಷಣ ಸಂಸ್ಥೆಗಳು, ಮಾಲ್‌ಗಳಂತಹ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು” ಎಂದು ತಿಳಿಸಿದರು.

“ಸ್ಥಾಪಿತ ಕ್ಯಾಮೆರಾಗಳು ಹೆಚ್ಚಿನ ರೆಸಲ್ಯೂಶನ್ ಹೊಂದಿವೆ. ಜನರ ಕೈಗಡಿಯಾರದಲ್ಲಿನ ಸಮಯವನ್ನು ಕೂಡಾ ನೋಡಬಹುದಾಗಿದೆ. ಈ ಕ್ಯಾಮೆರಾಗಳ ಕಾರ್ಯಾಚರಣೆಯನ್ನು ಇತ್ತೀಚೆಗೆ ಉದ್ಘಾಟನೆಯಾದ ಕಮಾಂಡ್ ಸೆಂಟರ್‌ನಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು

ವಿಡಿಯೊ ನೋಡಿ: SFI ನಾಯಕನ ಫೋಟೋ ಹಾಕಿ ಈತನೇ ಮನೋರಂಜನ್ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಬಿಜೆಪಿ Janashakthi Media

Donate Janashakthi Media

Leave a Reply

Your email address will not be published. Required fields are marked *