ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ(ಎಐಬಿಇಎ) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ಬ್ಯಾಂಕ್ ಆಫ್ ಬರೋಡಾ ಸೋಮವಾರದ ನಿಯಂತ್ರಕ ವಿಭಾಗದಲ್ಲಿ “ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಿದ್ದಾರೆ. ತಮ್ಮ ಸದಸ್ಯರು ಬೇಡಿಕೆಗಳ ಈಡೇರಿಕೆಗಾಗಿ ಬೆಂಬಲಿಸಿ ನವೆಂಬರ್ 19, 2022ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ” ಎಂದು ತಿಳಿಸಿದೆ.
ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದು ದೇಶದ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳು ಮುಂದಿನ ವಾರ ಮುಷ್ಕರ ನಡೆಸಲಿದ್ದಾರೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ನೋಟಿಸ್ ನೀಡಿದ್ದಾರೆ.
March on..🚩#BankStrike#AIBEA pic.twitter.com/cmhwggzt8n
— CH VENKATACHALAM (@ChVenkatachalam) October 31, 2022
ಕಳೆದ ತಿಂಗಳು, ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಒಕ್ಕೂಟದಲ್ಲಿ ಸಕ್ರಿಯರಾಗಿರುವ ಬ್ಯಾಂಕರ್ ಗಳನ್ನು ಗುರಿಯಾಗಿಸಲಾಗುತ್ತಿದೆ. ಈ ಕ್ರಮಗಳ ವಿರುದ್ಧ ಸದಸ್ಯರು ಮುಷ್ಕರ ನಡೆಸಲಿದ್ದಾರೆ ಎಂದು ಹೇಳಿದರು.
ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಮತ್ತು ಸಕ್ರಿಯರಾಗಿರುವ ಬ್ಯಾಂಕ್ ಉದ್ಯೋಗಿಗಳ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಗಳು ಹೆಚ್ಚುತ್ತಿವೆ. ಇವುಗಳ ಹಿಂದೆ ಬಲವಾದ ಕಾರಣವಿದೆ. ಇವುಗಳು ವ್ಯವಸ್ಥಿತ ಮತ್ತು ಹುಚ್ಚುತನದಿಂದ ಕೂಡಿದ ದಾಳಿಗಳು. ಈ ದಾಳಿಗಳ ವಿರುದ್ಧ ನಾವು ಪ್ರತಿಭಟಿಸಬೇಕಿದೆ. ಒಟ್ಟಾರೆಯಾಗಿ ಈ ಉದ್ದೇಶಿತ ದಾಳಿಗಳನ್ನು ತಡೆಯಲು ಬ್ಯಾಂಕ್ ಉದ್ಯೋಗಿಗಳ ಸಂಘದ ಮಟ್ಟದಲ್ಲಿ ನಾವು ಪ್ರಯತ್ನಿಸಬೇಕಿದೆ. ನಾವು ಈ ದಾಳಿಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು, ಹಿಮ್ಮೆಟ್ಟಿಸಬೇಕು ಎಂದು ಸಿ.ಎಚ್. ವೆಂಕಟಾಚಲಂ ಸುದ್ದಿಸಂಸ್ಥೆಯೊಂದಿಗೆ ವರದಿ ಮಾಡಿದ್ದಾರೆ.
ಸೋನಾಲಿ ಬ್ಯಾಂಕ್, ಎಂಯುಎಫ್‌ಜಿ ಬ್ಯಾಂಕ್, ಫೆಡರಲ್ ಬ್ಯಾಂಕ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ಗಳಲ್ಲಿ ಎಐಬಿಇಎ ಯೂನಿಯನ್ ನಾಯಕರನ್ನು ವಜಾಗೊಳಿಸಲಾಗಿದೆ. ದ್ವಿಪಕ್ಷೀಯ ಇತ್ಯರ್ಥ ಮತ್ತು ಬ್ಯಾಂಕ್ ಮಟ್ಟದ ಇತ್ಯರ್ಥವನ್ನು ಉಲ್ಲಂಘಿಸಿ 3,300 ಕ್ಲೆರಿಕಲ್ ಸಿಬ್ಬಂದಿಯನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವರ್ಗಾಯಿಸಲಾಗಿದೆ.
ಅಲ್ಲದೆ, ಬ್ಯಾಂಕ್ ಆಫ್ ಮಹಾರಾಷ್ಟ್ರದಂತಹ ಸರ್ಕಾರಿ ಬ್ಯಾಂಕ್‌ಗಳು ಟ್ರೇಡ್ ಯೂನಿಯನ್ ಹಕ್ಕುಗಳನ್ನು ನಿರಾಕರಿಸುತ್ತಿವೆ ಮತ್ತು ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಮತ್ತು ಐಡಿಬಿಐ ಬ್ಯಾಂಕ್ ಅನೇಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ‘ಜಂಗಲ್ ರಾಜ್’ ಆಗಿದ್ದು, ಮ್ಯಾನೇಜ್‌ಮೆಂಟ್ ವಿವೇಚನಾರಹಿತ ವರ್ಗಾವಣೆಗಳನ್ನು ಮಾಡುತ್ತಿವೆ ಎಂದು ವೆಂಕಟಾಚಲಂ ಹೇಳಿದರು.
ಮುಷ್ಕರದ ದಿನದಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನೂ ನಡೆಸಲಿದ್ದಾರೆ ಎಂದು ವೆಂಕಟಾಚಲಂ ಹೇಳಿದ್ದಾರೆ.