ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್

ಬೆಳಗಾವಿ: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಪಕ್ಷದ ಬಜರಂಗದಳ ನಿಷೇಧ ಭರವಸೆ ಕುರಿತು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯ ಮಹಾಂತ ಭವನದಲ್ಲಿ ಮಾತನಾಡಿದ ಅವರು, ಬಜರಂಗದಳ ಬ್ಯಾನ್ ಮಾಡುವುದಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಇಂದು ಸ್ಪಷ್ಟವಾಗಿ ಹೇಳಿದ್ದಾರೆ. ಯಾವುದೇ ಸಂಘ ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಅದು ಕೇಂದ್ರ ಸರ್ಕಾರಕ್ಕೆ ಇರುವ ಅಧಿಕಾರ. ಹೀಗಾಗಿ ನಾನು ಇದರ ಬಗ್ಗೆ ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಯಾರೂ ಏನೇ ಹೇಳಿದರೂ ಏನೂ ಮಾಡಲು ಸಾಧ್ಯವಿಲ್ಲ. ಇವತ್ತು ಜನರ ಪ್ರೀತಿ ವಿಶ್ವಾಸ ನಮ್ಮ ಮೇಲೆ ಇದೆ. ನಾವು ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದರು.

ಧಾನಸಭೆ ಚುನಾವಣೆ ಹಿನ್ನೆಲೆ ಇತ್ತೀಚೆಗಷ್ಟೇ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿದ್ದರು. ಇದು ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಮತ್ತೊಂದೆಡೆ ಬಿಜೆಪಿ ನಾಯಕರು ಕೂಡ ಕಾಂಗ್ರೆಸ್‌ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. ಇದೀಗ ಈ ವಿಚಾರಕ್ಕೆ ಜಗದೀಶ್‌ ಶೆಟ್ಟರ್‌ ಹೇಳಿರುವುದು ಬಹಳಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ.

Donate Janashakthi Media

Leave a Reply

Your email address will not be published. Required fields are marked *