ಬಾರಾಮುಲ್ಲಾ:ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಎನ್ಕೌಂಟರ್
ಈ ಕುರಿತು ಸಾಮಾಜಿ ಮಾಧ್ಯಮ ಎಕ್ಸ್‌ನಲ್ಲಿ ಕಾಶ್ಮೀರ ವಲಯ ಪೊಲೀಸ್ ಮಾಹಿತಿ ನೀಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಮತ್ತು ಹತ್ಸಂಗ ಪ್ರದೇಶದಲ್ಲಿ ಸೇನೆ ಹಾಗೂ ಬಾರಾಮುಲ್ಲಾ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಎನ್‌ಕೌಂಟರ್ ನಡೆದಿದೆ.
ಈ ವರೆಗೆ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ತಿಳಿಸಿದೆ.
ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
ಅನಂತನಾಗ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಉಗ್ರರ ಗುಂಡಿನ ದಾಳಿಗೆ ಒಟ್ಟು ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ.
ವೀಡಿಯೋ ನೋಡಿ:ಸತ್ತವರಿಗೆ ಚಿಕಿತ್ಸೆ, ಶಸ್ತ್ರಚಿಕಿತ್ಸೆಗೆ ಮುನ್ನ ಡಿಸ್ಚಾರ್ಜ್ ಇದು ಆಯುಷ್ಮಾನ್ ಭಾರತ್ ಕಥೆ ವ್ಯಥೆ