ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪದೇ ಪದೇ ಸಾರ್ವಜನಿಕವಾಗಿ ಆಕ್ರೋಶ ಹೊರಹಾಕುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಶಿಸ್ತು ಕ್ರಮ ಈ ಆದೇಶ ಹೊರಡಿಸಿದೆ. ಬಿಜೆಪಿ
ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ (BJP High Command) ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದ್ದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ : ವಿಜಯಪುರ| ಮೊದಲು ಜೆಸಿಬಿ ತಂದು ರಸ್ತೆಗುಂಡಿ ಮುಚ್ಚಿಸಿ – ಯತ್ನಾಳ್ ಜೆಸಿಬಿ ಹೇಳಿಕೆಗೆ ಸಾರ್ವಜನಿಕರ ಆಕ್ರೋಶ
ಯತ್ನಾಳ್ ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಠಾವೋವನ್ನು ಭಿನ್ನಮತಿಯರು ನಡೆಸುತ್ತಿದ್ದರು. ಪಕ್ಷದ ವಿಚಾರವನ್ನು ಹೊರಗಡೆ ಚರ್ಚಿಸಬೇಡಿ ಎಂದು ಬಿಜೆಪಿ ಸೂಚಿಸುತ್ತಿದ್ದರೂ ನಾಯಕರು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದಾರೆ.
ಇದನ್ನೂ ನೋಡಿ : ತರಬೇತಿ! ತರಬೇತಿ! ಕಲಿಸಲಾಗದ ಅಸಹಾಯಕ ಸ್ಥಿತಿಯಲ್ಲಿ ಶಿಕ್ಷಕ! – ಸಿ.ಆರ್.ಬಾಬುಖಾನ್ ಮತ್ತು ಗುರುರಾಜ ದೇಸಾಯಿ ಮಾತುಕತೆ