ಬೆಂಗಳೂರು: ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಜನತಾ ದಳ (ಜಾತ್ಯತೀತ)-ಜೆಡಿ(ಎಸ್) ಪಕ್ಷವು ಸ್ಪರ್ಧೆ ಮಾಡುತ್ತಿದ್ದೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಪಕ್ಷದ ಕಛ಼ೇರಿ ಜೆ.ಪಿ.ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಸವ ಕಲ್ಯಾಣ ಕ್ಷೇತ್ರಕ್ಕೆ ಸೈಯದ್ ಎಸ್ರಬ್ ಅಲಿ ಖಾದ್ರಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ವರ್ಷದಿಂದ ಕೆಲಸ ಮಾಡಿದ್ದಾರೆ. ಇವಾಗ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಮಸ್ಕಿ ಕ್ಷೇತ್ರದಲ್ಲಿಯೂ ಗೆಲ್ಲುವ ಎಲ್ಲಾ ಸಾಧ್ಯತೆಗಳು ಇರುವುದರಿಂದ ಅಲ್ಲಿಯೂ ನಾವು ಅಭ್ಯರ್ಥಿಯನ್ನು ಹಾಕುತ್ತಿದ್ದೇವೆ. ಅಲ್ಲಿನ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ ನಾಳೆಯೊಳಗೆ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿ ಘೋಷಣೆ ಮಾಡುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿಯೂ ಪಕ್ಷದ ಅಭ್ಯರ್ಥಿಯು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು.
ಬಸವಕಲ್ಯಾಣದಲ್ಲಿ 7 ಬಾರಿ ಜೆಡಿಎಸ್ ಗೆದಿದ್ದೆ. ಮೊದಲಿನಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಕ್ಷೇತ್ರ. ನಾನು ಸಹ ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಕಳೆದ ಚುನಾವಣೆಯಲ್ಲಿ ನಾವು ದೊಡ್ಡ ಅಂತರದಲ್ಲಿ ಗೆಲ್ಲುತ್ತಿದ್ದೇವು. ಆದರೆ, ಕಾಂಗ್ರೆಸ್ ಪಕ್ಷದ ಪಿತೂರಿಯಿಂದಾಗಿ ಒಂದು ಸಮಾಜದ ಮೇಲೆ ನಮ್ಮ ವಿರುದ್ಧವೇ ಎತ್ತಿಕಟ್ಟಿದರು. ಈ ಕ್ಷೇತ್ರದಲ್ಲಿ ನಾವು ಗೆಲ್ಲುವುದು ಅಗತ್ಯವಾಗಿದೆ.
ಕಾಂಗ್ರೆಸ್ ಕುತಂತ್ರದಿಂದಾಗಿ ಕಳೆದ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡಿದ್ದರು. ಅದರಿಂದಾಗಿ ನಮಗೆ ಕಡಿಮೆ ಸ್ಥಾನ ಸಿಕ್ಕಿತು. ನಂತರ ಅವರೇ ನಮ್ಮ ಮನೆ ಬಾಗಿಲಿಗೆ ಬಂದರೇ ಹೊರತು ನಾವಂತೂ ಅವರ ಬಳಿ ಹೋಗಿಲ್ಲ. ಇನ್ನು ನಾವು ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ.
ಸೋಲು-ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವೇವು. ನಾವು ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಬಾರಿ ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ಉತ್ತರ ಕೊಡುತ್ತೇವೆ. ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವೈಮುಲ್ ಚುನಾವಣೆ ಮುಗಿದ ಅಧ್ಯಾಯ
ಸಾರಾ ಮಹೇಶ್ ರವರಿಗೆ ಬೇಸರವಾಗಿದೆ. ಭಾವನಾತ್ಮಕ ಜೀವಿ ಅವರು ಹಾಗಾಗಿ ಕಣ್ಣೀರು ಹಾಕಿದ್ದಾರೆ. ನನಗಿಂತ ಹೆಚ್ಚಿನ ಭಾವನಾತ್ಮಕ ಜೀವಿ. ಯಾವ ವಿಚಾರವನ್ನೂ ಮನಸ್ಸಿಗೆ ತೆಗೆದುಕೊಳ್ಳಬೇಡಿ, ಮುಂದಿನ ದಿನಗಳಲ್ಲಿ ಧೈರ್ಯವಾಗಿ ನಿಂತು ಪಕ್ಷ ಚಟುವಟಿಕೆಯಲ್ಲಿ ಭಾಗಿಯಾಗಿ ಎಂದು ಹೇಳಿದ್ದೇನೆ.
ಮುಂಬರುವ ಪಂಚಾಯತ್ ಚುನಾವಣೆ ಮುಖ್ಯ ನಮ್ಮ ಕಾರ್ಯಕರ್ತರು ಏನು ಅಂತಾ ತೋರಿಸುತ್ತಾರೆ.
ಜಿ.ಟಿ.ದೇವೇಗೌಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.