ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಹಾಗೂ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ: ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಅಂಗನವಾಡಿಗಳ ಕತ್ತು ಹಿಸುಕಬೇಡಿ – ಕಾರ್ಯಕರ್ತರನ್ನು ತರಬೇತಿಗೊಳಿಸಿ Janashakthi Media