ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ

ಬೆಳಗಾವಿ: ಡಿಸೆಂಬರ್ 9ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವನ್ಯಜೀವಿ ಸಂಘರ್ಷ ತಡೆಗೆ ಕ್ರಮ | ಸಚಿವ ಈಶ್ವರ್ ಖಂಡ್ರೆ

ಬೆಂಗಳೂರಿನ ಬಸವನಗುಡಿಯಲ್ಲಿ ಬಹಳ ವರ್ಷಗಳಿಂದ ಕಡಲೆಕಾಯಿ ಪರಿಷೆ ನಡೆಯುತ್ತಿದೆ‌. ಮಲ್ಲೇಶ್ವರಂನಲ್ಲೂ ಕಡೆಲೆಕಾಯಿ ಪರಿಷೆ ನಡೆಯುತ್ತಿದೆ. ಪರಿಷೆಗೆ ಲಕ್ಷಾಂತರ ಜನ ಪರಿಷೆಗೆ ಬರುತ್ತಾರೆ. ಹಾಗಾಗಿ ಶಾಸಕ ರವಿ ಸುಬ್ರಹ್ಮಣ್ಯ, ಯುಬಿ ವೆಂಕಟೇಶ್ ನಾವು ಎಲ್ಲರೂ ಸಭೆ ಮಾಡಿದ್ದೇವೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಟ್ರಾಪಿಕ್ ಸಮಸ್ಯೆ ಸೇರಿದಂತೆ ಬಂದ ಜನರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕ್ರಮ ತೆಗೆದುಕೊಳ್ಳಲಾಗುವುದು. ಬರುವವರು ಪ್ಲಾಸ್ಟಿಕ್ ಬದಲಾಗಿ ಕೈ ಚೀಲಾ ಹಿಡಿದು ಬರಬೇಕು ಎಂದು ಕರೆ ನೀಡಿದರು.

ವಿಡಿಯೋ ನೋಡಿ: ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ – ಡಾ. ಮೀನಾಕ್ಷಿ ಬಾಳಿ

Donate Janashakthi Media

Leave a Reply

Your email address will not be published. Required fields are marked *