ತತ್ವಜ್ಞಾನಿ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ | ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತತ್ವಜ್ಞಾನಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಗುರುವಾರ ಘೋಷಿಸಿದೆ. “ಭಾರತದ ಸಂವಿಧಾನದ ಪ್ರಸ್ತುತ ಎತ್ತಿಹಿಡಿದಿರುವ ಜಾತಿಭೇದವಿಲ್ಲದ, ವರ್ಗ ತಾರತಮ್ಯವಿಲ್ಲದ, ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ಬಸವಣ್ಣನವರ ನೇತೃತ್ವದಲ್ಲಿ ನಡೆಯಿತು” ಎಂದು ಸರ್ಕಾರ ಹೇಳಿದೆ.

ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವಾಲಯವು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದೆ. ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು-1977ರ ಮೊದಲ ಅನುಸೂಚಿಯ ಪ್ರಕರಣ 1ರ ಪ್ರಕಾರ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯರನ್ನಾಗಿ ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಅವಹೇಳನ ಪ್ರಕರಣ | ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ವಾದ ಮಾಡಿದ್ದು ಕಾಂಗ್ರೆಸ್ ನಾಯಕ!

“ನಮ್ಮ ಭಾರತದ ಸಂವಿಧಾನದಲ್ಲಿ ಪ್ರಸ್ತುತ ಎತ್ತಿಹಿಡಿದಿರುವ ಜಾತಿಭೇದವಿಲ್ಲದ, ವರ್ಗ ತಾರತಮ್ಯವಿಲ್ಲದ, ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ಬಸವಣ್ಣನವರ ನೇತೃತ್ವದಲ್ಲಿ ನಡೆಯಿತು. ಬಸವಣ್ಣನವರ ನೇತೃತ್ವದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ತಾತ್ವಿಕ ಮೌಲ್ಯಗಳು ಪ್ರತಿಪಾದನೆಗೊಂಡು ಶರಣ ಸಂಕುಲದಲ್ಲಿ ಅಳವಡಿಕೆಗೆ ಗೊಂಡಿದ್ದವು” ಎಂದು ಸರ್ಕಾರ ಹೇಳಿದೆ.

“ಬಸವಣ್ಣನವರನ್ನು ವೈಶ್ವಿಕ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಮಹನಿಯರಾಗಿ ನಮ್ಮ ಕರ್ನಾಟಕ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಉದ್ದೇಶಿಸಲಾಗಿದೆ. ಬಸವಣ್ಣನವರು ಸಾರ್ವತ್ರಿಕವಾದ, ಸಾರ್ವಕಾಲಿಕವಾದ ಸರ್ವಜನ ಸಮಾಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅನುರೂಪವಾದ ಅವರ ಚಿಂತನೆಗಳು, ಬಸವಣ್ಣನವರ ಸಾಂಸ್ಕೃತಿಕ ನಾಯಕತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿವೆ” ಎಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಡಿಯೊ ನೋಡಿ: ಜಾತಿವಾದಿ ವ್ಯವಸ್ಥೆಯ ಸಂಚಿನಿಂದ ಹತ್ಯೆಯಾದ ರೋಹಿತ್ ವೇಮುಲ Janashakthi Media

Donate Janashakthi Media

Leave a Reply

Your email address will not be published. Required fields are marked *