ಮನೆ ಕುಸಿದು 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ  ಧಾರಾಕಾರ  ಮಳೆಗೆ ಮನೆ ಬಿದ್ದು 7 ಜನ ಸಾವನ್ನಪ್ಪಿರುವ ಪ್ರಕರಣದಲ್ಲಿ ಬದುಕುಳಿದ ವ್ಯಕ್ತಿ ಭೀಮಪ್ಪ ಎಂದು ಗುರುತಿಸಲಾಗಿದೆ.

ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ ಬೊಮ್ಮಾಯಿ, ಮನೆ ಕುಸಿತದಿಂದ ಸಂಭವಿಸಿರುವ ಈ ಅನಾಹುತ ದುರದೃಷ್ಟಕರ. ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ ಎಂದಿದ್ದಾರೆ. ಭೀಮಪ್ಪನ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರ್ಕಾರ ನಿನ್ನ ಜೊತೆಗಿರುತ್ತದೆ ತಕ್ಷಣವೇ ಪರಿಹಾರದ ಹಣವನ್ನು ತಲುಪಿಸಲಾಗುವುದು.  ಯಾವುದೇ ಕಾರಣಕ್ಕೂ ದೃತಿಗೆಡಬೇಡ ಎಂದು ಭರವಸೆ  ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಬೆಳಗಾವಿ ಡಿಸಿ ಎಂ.ಜಿ. ಹಿರೇಮಠ ಅವರೊಂದಿಗೂ ಮಾತನಾಡಿದ್ದಾರೆ. ತಕ್ಷಣ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮೃತಪಟ್ಟಿರುವವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಪ್ರಧಾನಿಯಿಂದ 2 ಲಕ್ಷ ಪರಿಹಾರ ಘೋಷಣೆ :  ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿಯಲ್ಲಿ ಗೋಡೆ ಕುಸಿದು ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ ₹ 2 ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿದು ಜೀವ ಹಾನಿ ಸಂಭವಿಸಿದ ಸುದ್ದಿ ಹೇಳಿ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬ ಸದಸ್ಯರ ಜೊತೆ ನಾನಿದ್ದೇನೆ.  ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *