ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಇಂದು

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ನಿನ್ನೆ ಶಾಸಕಾಂಗ ಸಭೆಯ ಬಳಿಕ ನೇರವಾರ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಅವರಲ್ಲಿ ಸರ್ಕಾರ ರಚಿಸಲು ಅನುಮಯಿ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ಗಣ್ಯರು ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜೊತೆಯಲ್ಲಿದ್ದರು.

ಬುಧವಾರ ಬೆಳಿಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : ನೂತನ ಮುಖ್ಯಮಂತ್ರಿಯಾಗಿ ಬಸವರಜಾ ಬೊಮ್ಮಾಯಿ ಆಯ್ಕೆ

ಶುಭಕೋರಿದ ಮಾಜಿ ಸಿಎಂ : ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಪುತ್ರನಿಗೆ ಸಿಎಂ ಪಟ್ಟ : ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗುತ್ತಿದ್ದಂತೆ ಅಪರೂಪದ ದಾಖಲೆಯೊಂದು ನಿರ್ಮಾಣವಾಗಿದೆ. ತಂದೆ ಬಳಿಕ ಮಗ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ಕರ್ನಾಟಕದಲ್ಲಿ ಇದು 2ನೇ ಬಾರಿ. ಬಸವರಾಜ ಬೊಮ್ಮಾಯಿ ತಂದೆ ಸೋಮಪ್ಪ ರಾಯಪ್ಪ ಬೊಮ್ಮಾಯಿ(ಎಸ್.ಆರ್ ಬೊಮ್ಮಾಯಿ) ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಹೆಚ್ ಡಿ ದೇವೇಗೌಡ ಹಾಗೂ ಪುತ್ರ ಹೆಚ್‌ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *