ಯಲಬುರ್ಗಾ : ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ. ನಮ್ಮ ರಾಜ್ಯದಲ್ಲಿ ಒಂದು ರೈತರಿಗೆ ಅನುಕೂಲ ಆಗುವಂತೆ ಒಂದು ನೀರಾವರಿ ಯೋಜನೆ ಡ್ಯಾಂ ಕಟ್ಟುವ ಸಾಮರ್ಥ್ಯ ಬಿಜೆಪಿ ಸರ್ಕಾರಕ್ಕೆ ಇಲ್ಲ. ಬಿಜೆಪಿ ನಾಯಕರಿಗೆ ನೀರಾವರಿ ಬಗ್ಗೆ ಗಂಧ ಗಾಳಿ ಗೊತ್ತಿಲ್ಲದೆ ನೀರಾವರಿ ಬಗ್ಗೆ ಮಾತನಾಡುತ್ತಾರೆ. ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈರಪ್ಪ ಕುಡುಗುಂಟಿ ಅವರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಬಿಜೆಪಿ ಪಕ್ಷ ತೊರೆದು. ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ರಾಜ್ಯದಲ್ಲಿ ಸುಮಾರು ನದಿಗಳನ್ನು ಕಟ್ಟಲಾಗಿದೆ. ಬಿಜೆಪಿ ಸರ್ಕಾರದವರು ರೈತರಿಗೆ ಅನುಕೂಲವಾಗುವಂತ ನೀರಾವರಿ ಯೋಜನೆ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಬಿಜೆಪಿ ಸರ್ಕಾರದ ಸುಳ್ಳು ಭರವಸೆ ನೋಡಿ ಜನ ಬೇಸತ್ತು. ಈ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು. ನಿತ್ಯ ಸಾವಿರಾರು ಕಾರ್ಯಕರ್ತರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ರಾಜ್ಯದಲ್ಲಿ ಹಾಗೂ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ಬಯಸಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಬಿಜೆಪಿಯನ್ನು ಮನೆಗೆ ಕಳುಹಿಸಲು ಕಾತರದಿಂದ ಕಾಯುತ್ತಿದ್ದಾರೆ. ಜನ ನೆಮ್ಮದಿಯಾಗಿರಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್
ದೇಶಕ್ಕೆ ಅನೇಕ ಕೊಡುಗೆಗಳನ್ನು ಕೊಟ್ಟಿದೆ ಎಂದರು.
ಬಿಜೆಪಿ ಒಂದೂ ಜನಪರ ಕೆಲಸ ಮಾಡಿಲ್ಲ. ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಿಲ್ಲ. ಯುವಕರು ಉದ್ಯೋಗ ಇಲ್ಲದೆ ಮನೆಯಲ್ಲಿದ್ದಾರೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಮೋದಿ ಅಧಿಕಾರಕ್ಕೆ ಬಂದು 9 ವರ್ಷಗಳಾದರೂ ದೇಶಕ್ಕೆ ಅಚ್ಛೇದಿನ್ ಬರಲೇ ಇಲ್ಲ. ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಗರಣಗಳಲ್ಲಿ ತೊಡಗಿದೆ. ಗುತ್ತಿಗೆದಾರರಿಂದ ಶೇ 40 ಕಮಿಷನ್, ಟೆಂಡರ್‌ನಲ್ಲಿ ಹಗರಣ, ಪಿಎಸ್‌ಐ ಹಗರಣ ಮಾಡಿದ್ದಷ್ಟೇ ಬಿಜೆಪಿಯವರ ಸಾಧನೆ ‘ಬಿಜೆಪಿ ಬಡವರ ವಿರೋಧಿ ಪಕ್ಷ. ಈಗಾಗಲೇ ಜನ ಬಿಜೆಪಿ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಉದ್ಧಾರ ಸಾಧ್ಯ. ನಾನು ಸಚಿವನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ರೈತರಿಗೆ ಗಂಗಾ ಕಲ್ಯಾಣ ಯೋಜನೆ ನೀಡಿದ್ದೇನೆ’ ಮುಂದೆ . ನಾನು ಶಾಸಕನಾದರೆ. ಕ್ಷೇತ್ರದ.60 ಕೆರೆಗಳಿಗೆ ನೀರು ತುಂಬಿಸುವ ಯೋಜನೆ. ರಾಜ್ಯದಲ್ಲೇ ಅತ್ಯಂತ ದೊಡ್ಡ ಮಾದರಿ ಆಸ್ಪತ್ರೆ. ಕಟ್ಟುವ ಕನಸು ಇದೆ ಈ ಕ್ಷೇತ್ರಕ್ಕೆ ಇನ್ನೂ ನಾಲ್ಕು ಪಟ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ ನನಗೆ ಈ ಬಾರಿ ಅವಕಾಶ ಮಾಡಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಉಳ್ಳಾಗಡ್ಡಿ. ವೀರನಗೌಡ ಬಳೂಟಿಗಿ. ರಾಮಣ್ಣ ಸಾಲಬಾವಿ. ಶಿವಾನಂದ ಬಣಕಾರ್ ಸೇರಿದಂತೆ ಅನೇಕರಿದ್ದರು.