ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ

ಬೆಂಗಳೂರು: ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನಲೆಯಲ್ಲಿರುವ ತೆರವಾಗಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ತಮ್ಮ ಪುತ್ರ ಭರತ್‌ನನ್ನು ಬೊಮ್ಮಾಯಿ ಕಣಕ್ಕಿಳಿಸುತ್ತಿದ್ದಾರೆ. ಶಿಗ್ಗಾವಿ

ಕೈಗಾರಿಕೋದ್ಯಮಿಯಾಗಿರುವ ಭರತ್‌ ಉಪಚುನಾವಣೆ ಮೂಲಕ ರಾಜಕೀಯ ಪ್ರವೇಶಿಸುತ್ತಿದ್ದಾರೆ. ಭರತ್‌ ಸ್ಪರ್ಧೆಗೆ ಬಿಜೆಪಿ ಒಪ್ಪಿದ್ದು, ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಬಹುತೇಕ ಕಣಕ್ಕಿಳಿಯುವ ಸಾಧ್ಯತೆ ನಿಚ್ಚಳವಾಗಿದೆ.

ಇದನ್ನೂ ಓದಿ: ನೇರಳೆ ಕೀಳಲು ಹೋದ ವಿಧ್ಯಾರ್ಥಿ ವಿದ್ಯುತ್ ಶಾಕ್‌ ತಗುಲಿ ಸಾವು

ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶಾಸಕ ಸ್ಥಾನಕ್ಕಿಂದು ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿ, ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ನಿರಂತರ ವಾಗಿ 4 ಬಾರಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ‌. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ಬರುವುದರಿಂದ ಅದರ ಅಭಿವೃದ್ಧಿಗೆ ನನ್ನ ಶ್ರಮ ಮುಂದುವರೆಯಲಿದೆ ಎಂದು ಹೇಳಿದರು.

ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ.  ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವುದಾಗಿ ಬಸವರಾಜಬೊಮ್ಮಾಯಿ ಸ್ಪಷ್ಟಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ  ಬಗ್ಗೆ‌ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ.

‘ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ.ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ  ಈ ವೇಳೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಜರಿದ್ದರು.

ಇದನ್ನೂ ನೋಡಿ: ಚುನಾವಣಾ ಫಲಿತಾಂಶದ ನಂತರವೂ ಮುಸ್ಲಿಂರೇ ಟಾರ್ಗೆಟ್‌!? – ಮುನೀರ್ ಕಾಟಿಪಳ್ಳ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *