ಜಮ್ಮು ಕಾಶ್ಮೀರ ಜನತೆ ಮೇಲಿನ ಕ್ರೌರ್ಯ ನ್ಯಾಯಾಂಗ ಗಮನಿಸುತ್ತಿಲ್ಲ: ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ಮೇಲೆ ನಡೆಸುತ್ತಿರುವ ಕ್ರೌರ್ಯವನ್ನು ನ್ಯಾಯಾಂಗ ಗಮನಿಸುತ್ತಿಲ್ಲ. ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಎಂಬುದು ‘ಐಷಾರಾಮಿ’ ಮತ್ತು ‘ಅರ್ಹತೆಗಳು’ ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಷಯಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಮೂರ್ತಿ ಡಿ. ವೈ. ಚಂದ್ರಚೂಡ್‌ ಅವರಿಗೆ ಪತ್ರ ಬರೆದಿರುವ ಮೆಹಬೂಬಾ ಮುಫ್ತಿ, ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿಯು ಸಂವಿಧಾನವನ್ನು ನಾಶ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆಂದು ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ: ಮೆಹಬೂಬಾ ಮುಫ್ತಿ

ಕೇಂದ್ರಾಡಳಿತ ಪ್ರದೇಶದ ಜನರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಜನತೆಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ಆದರೆ ನ್ಯಾಯಾಂಗ ಮಾತ್ರ ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಬರೆದಿದ್ದಾರೆ.

ಸಾಮಾನ್ಯ ನಾಗರಿಕರು, ಪತ್ರಕರ್ತರು, ಮುಖ್ಯವಾಹಿನಿಯ ರಾಜಕೀಯ ಕಾರ್ಯಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ತಮ್ಮ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸುವ ದಮನಕಾರಿ ಅನಿಯಂತ್ರಿತ ನಿರ್ಧಾರಗಳ ಭಾರವನ್ನು ಹೊತ್ತಿರುವ ಲೆಕ್ಕವಿಲ್ಲದಷ್ಟು ಉದಾಹರಣೆಗಳಿವೆ. ಅಲ್ಲದೆ, ಕೌಟುಂಬಿಕ ಸದಸ್ಯರೆಲ್ಲರ ಪಾಸ್‌ಪೋರ್ಟ್‌ಗಳನ್ನು ಸರ್ಕಾರ ಕಿತ್ತುಕೊಂಡಿದೆ ಎಂದು ಬರೆದಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ತೆಗೆದು ಹಾಕಿದ ನಂತರದಲ್ಲಿಯೇ ಇಂತಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದಿರುವ ಮೆಹಬೂಬಾ ಮುಫ್ತಿ, ಲಡಾಖ್‌ನಲ್ಲಿ ಚೀನಾದೊಂದಿಗೆ ಭಾರತೀಯ ಸೇನೆಯ ಘರ್ಷಣೆಯ ಬಗ್ಗೆ ಉಲ್ಲೇಖಿಸಿ ಲಡಾಖ್‌ನಲ್ಲಿ ನಮ್ಮ ಭೂಮಿಯನ್ನು ಅತಿಕ್ರಮಿಸಲಾಗಿದೆ. ಆದರೆ ದುರದೃಷ್ಟವಶಾತ್ ಬಿಜೆಪಿ ಅದರ ಬಗ್ಗೆ ಬಿಜೆಪಿ ಏನೇನೂ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *