ಬಿಬಿಎಂಪಿ ಅಗ್ನಿ ಅವಘಢ ಪ್ರಕರಣ : ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಆಗಸ್ಟ್‌-30 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇದನ್ನೂ ಓದಿ:ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ : ಪ್ರತ್ಯೇಕ ತನಿಖೆಗೆ ಸಿಎಂ ಸೂಚನೆ

ಹೌದು ಬಿಬಿಎಂಪಿಯಲ್ಲಿ ನಡೆದ ಅಗ್ನಿ ದುರಂತದ ಪರಿಣಾಮವಾಗಿ ಅಧೀಕ್ಷಕ ಎಂಜಿನಿಯರ್ ಅವರನ್ನು ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕುಡಿಸಲಾಗುತ್ತಿತ್ತು, ಇವರಲ್ಲಿ ಎಸಿ ಶಿವಕುಮಾರ್ ಅವರಿಗೂ ಕೂಡ ಇದೇ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಆದರೆ ಇದೀಗ ಎಸ್‌.ಇ ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಗ್ನಿ ದುರಂತದಲ್ಲಿ ಶಿವಕುಮಾರ್ ಅವರಿಗೆ ಶೇಕಡ 25 ರಷ್ಟು ಸುಟ್ಟ ಗಾಯಗಳಾಗಿದ್ದವು ಇದರಿಂದ ಬಳಲುತ್ತಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ ಒಂದು ವಾರ ಚಿಕಿತ್ಸೆ ಪಡೆದುಕೊಂಡಿದ್ದರು, ಆದರೆ ಶ್ವಾಸಕೋಶ ನಿಷ್ಕ್ರಿಯವಾದ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು

ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ:

ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ. ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *