ಬೆಂಗಳೂರು: ಕೋವಿಡ್ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಾಸರಹಳ್ಳಿ ವಲಯ ವ್ಯಾಪ್ತಿಯ ಬಾಗಲಗುಂಟೆ ಪ್ರದೇಶದಲ್ಲಿರುವ ಕಾರ್ಮಿಕ ಭವನದಲ್ಲಿ 127 ಹಾಸಿಗೆಯುಳ್ಳ ಕೋವಿಡ್ ಆರೈಕೆ ಕೇಂದ್ರ ಇಂದು ಉದ್ಘಾಟನೆಯಾಗಿದೆ.
ಕೋವಿಡ್ ರೋಗ ಲಕ್ಷಣ ಇಲ್ಲದವರಿಗೆ ಇಲ್ಲಿ ಐಸೋಲೇಷನ್‌ಗೆ ಒಳಗಲು ಸೌಲಭ್ಯ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
127 ಹಾಸಿಗೆ ಪೈಕಿ 10 ಆಕ್ಸಿಜನ್ ಬೆಡ್ ವ್ಯವಸ್ಥೆ ಒಳಗೊಂಡಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಕಂದಾಯ ಸಚಿವ ಆರ್. ಅಶೋಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ, ಶಾಸಕರಾದ ಆರ್ ಮಂಜುನಾಥ್, ದಾಸರಹಳ್ಳಿ ಬಿಬಿಎಂಪಿ ವಲಯ ಆಯುಕ್ತರಾದ ರವೀಂದ್ರ, ಜಂಟಿ ಆಯುಕ್ತ ನರಸಿಂಹ ಮೂರ್ತಿ ಉಪಸ್ಥಿತರಿದ್ದರು.