ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ : ಹೈಕೋರ್ಟ್

ಬೆಂಗಳೂರುಬೃಹತ್‌ ಬೆಂಗಳೂರು ಮಾಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ದಿನಾಂಕ ನಿಗಧಿ ಪಡಿಸಲಾಗಿದೆ. ಆ ಮೂಲಕ ಚುನಾವಣೆಗೆ ಸಂಬಂಧಿಸಿದಂತೆ ಇದ್ದ ಜಟಾಪಟಿಗೆ ತೆರೆ ಬಿದ್ದಿದ್ದು,  ಹೈಕೋರ್ಟ್‌, ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ಇದೇ ವರ್ಷದ ನವಂಬರ್‌ 3ರಷ್ಟರಲ್ಲಿ ಮೀಸಲಾತಿ ಪಟ್ಟಿಯನ್ನು ಸರಿಪಡಿಸಿ,  ಡಿಸೆಂಬರ್‌ 31ರ ಒಳಗೆ ಚುನಾವಣೆ ನಡೆಸುವಂತೆ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಆದೇಶ ನೀಡಿದ್ದಾರೆ.

ಹೈಕೋರ್ಟ್‌ ಹೀಗಾಗಲೇ ಬಿಬಿಎಂಪಿ ವಾರ್ಡ್‌ ಪುನರ್ವಿಂಗಡಣೆಯನ್ನು ಪ್ರಶ್ನಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾ ಮಾಡಿತ್ತು. ಶಾಸಕ ಜಮೀರ್‌ ಅಹಮ್ಮದ್‌ ಖಾನ್‌, ಸತೀಶ್‌ ರೆಡ್ಡಿ, ಸೌಮ್ಯ ರೆಡ್ಡಿ ಸೇರಿದಂತೆ 10ಕ್ಕೂ ಹೆಚ್ಚು ಅಧಿಕ ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಲಾಗಿತ್ತು. ಬಿಬಿಎಂಪಿ ಯ ಚುನಾವಣೆಯನ್ನು ಶೀಘ್ರದಲ್ಲೇ ನಡೆಸಬೇಕಾದ ಸುಪ್ರೀಂ ಕೋರ್ಟ್‌ ಆದೇಶಿಸಿದಂತೆ ಅದರ ನಿರ್ದೇಶನದಂತೆ ನಡೆದುಕೊಳ್ಳುವುದಾಗಿ ಸರ್ಕಾರ ಕೂಡ ತಿಳಿಸಿತ್ತು.

“ಬಿಬಿಎಂಪಿ ವಾರ್ಡ್ ವಾರು ಮೀಸಲು ನಿಗದಿಯಲ್ಲಿ ತಾರತಮ್ಯ ಎಸಗಲಾಗಿದೆ” ಎಂದು ಆಕ್ಷೇಪಿಸಿ   ಈಜಿಪುರದ ಕೆ.ಮಹದೇವ, ಕಮ್ಮನಹಳ್ಳಿಯ ಪಳನಿ ದಯಾಳನ್‌, ದೊಡ್ಡಬಾಣಸವಾಡಿಯ ವಿ.ಶ್ರೀನಿವಾಸ್‌ ಮತ್ತು ನಾಗನಾಥಪುರದ ಕೆ.ಚಂದ್ರಶೇಖರ್ ಸೇರಿದಂತೆ ಎಂಟು ಜನ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. “ಸರ್ಕಾರ ಒಬಿಸಿ (ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ) ಆಯೋಗಕ್ಕೆ ಅಂಕಿ ಅಂಶ ಒದಗಿಸಬೇಕು. 2022ರ ನವೆಂಬರ್ 30ರೊಳಗೆ ಮೀಸಲಾತಿ ಪ್ರಕಟಿಸಬೇಕು ಮತ್ತು ಡಿಸೆಂಬರ್ 31ರೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸಬೇಕು” ಎಂದು ನ್ಯಾಯಪೀಠ ಆದೇಶಿಸಿದೆ.

ಅಂತೆಯೇ,ಬಿಬಿಎಂಪಿ ಚುನಾವಣೆ 2022 ಅಂತಮ ಮತದಾರರ ಪಟ್ಟಿ ಪ್ರಕಟವಾಗಿದೆ.  ಸರ್ಕಾರ ಈ ಮೊದಲು ಹೊರಡಿಸಿದ್ದ 243 ವಾರ್ಡ್‌ಗಳ ಮೀಸಲು ಪಟ್ಟಿಯ ಅಧಿಸೂಚನೆಯನ್ನು ರದ್ದುಪಡಿಸಿದೆ. ಪಾಲಿಕೆ 243 ವಾರ್ಡ್ ಗಳಲ್ಲಿ ಒಟ್ಟು 79 ಲಕ್ಷ 19 ಸಾವಿರದ 5663 ಮತದಾರರಿದ್ದಾರೆ, ಅದರಲ್ಲಿ 41 ಲಕ್ಷದ 14 ಸಾವಿರದ 383 ಪುರುಷರು, 38 ಲಕ್ಷ 3 ಸಾವಿರದ 747 ಮಹಿಳೆಯರು, 1433 ಇತರೆ ಮತದಾರರು ಇದ್ದಾರೆ ಎಂದು ಬಿಬಿಎಂಪಿ ಹೇಳಿಕೆ ನೀಡಿದೆ.

 

Donate Janashakthi Media

Leave a Reply

Your email address will not be published. Required fields are marked *