ಬಿಬಿಎಂಪಿ ಮೀಸಲಾತಿ ನಿಗದಿ ಪುನರ್‌ ಪರಿಶೀಲನೆ ಕುರಿತು ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Please follow and like us:

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 243 ವಾರ್ಡ್‌ಗಳಿಗೆ ನಿಗದಿ ಪಡಿಸಿರುವ ಮೀಸಲಾತಿಯ ಬಗ್ಗೆ  ಪುನರ್ ಪರಿಶೀಲನೆ ನಡೆಸುವ ಬಗ್ಗೆ ಸರ್ಕಾರದ ನಿಲುವು ತಿಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ಈಜಿಪುರದ ಕೆ ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು, ಕೆಲವು ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್‌ಗಳನ್ನೂ ಮಹಿಳೆಯರಿಗೆ ಮೀಸಲು ನಿಗದಿಪಡಿಸಲಾಗಿದೆ. ಆ ಮೂಲಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆಕ್ಷೇಪಿಸಿದರು.

ಅರ್ಜಿದಾರರು, ಇದುವರೆಗೆ ಯಾವ ಯಾವ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂಬ ಪಟ್ಟಿ ಒದಗಿಸಿಲ್ಲ. ಆದ್ದರಿಂದ, ಬಿಬಿಎಂಪಿ ವಾರ್ಡ್‌ವಾರು ಮೀಸಲು ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

ನ್ಯಾಯಪೀಠ ಬಿಬಿಎಂಪಿ ಮೀಸಲು ನಿಗದಿ ಮಾಡಿರುವುದಲ್ಲಿ ಏನಾದರೂ ಲೋಪಗಳು ಇದ್ದಲ್ಲಿ ಪುನಃ ಮೀಸಲು ನಿಗದಿಪಡಿಸುವಂತೆ ಅದೇಶ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಕುರಿತು ಹೊಸದಾಗಿ ವಾರ್ಡ್‌ವಾರು ಮೀಸಲು ನಿಗದಿ ಮಾಡುವ ಬಗ್ಗೆ ಸರ್ಕಾರದ ನಿಲುವು ತಿಳಿಸಿಬೇಕೆಂದು ವಿಚಾರಣೆ ವೇಳೆ ತಿಳಿಸಿದರು.

ಅರ್ಜಿದಾರರು, ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದು ಮಾಡಬೇಕು. ವಾರ್ಡ್‌ವಾರು ಮೀಸಲು ನಿಗದಿಯಲ್ಲಿ ನಿಯಮ ಪಾಲನೆಯಾಗಿಲ್ಲ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಡಾ. ಭಕ್ತವತ್ಸಲ ಸಮಿತಿ ನೀಡಿರುವ ವರದಿ ಆಧರಿಸಿ ಮೀಸಲು ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಕೃಷ್ಣಮೂರ್ತಿ ಹಾಗೂ ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿರುವ ಮೂರು ಹಂತದ ಪರಿಶೀಲನೆ ಅನ್ನು ಭಕ್ತವತ್ಸಲ ಸಮಿತಿಯೇ ಅನ್ವಯಿಸಿಕೊಂಡಿಲ್ಲ. ರಾಜ್ಯ ಸರ್ಕಾರ ಸಹ ಮೀಸಲು ಕಲ್ಪಿಸುವಾಗ ಮೂರು ಹಂತದ ಪರಿಶೀಲನೆ ಪರಿಗಣಿಸಿಲ್ಲ ಎಂಬುದು ಅರ್ಜಿದಾರರ ವಾದವಾಗಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ರಾಜಕೀಯ ಮೀಸಲಾತಿಗೆ ಮಾನದಂಡವೇ ಬೇರೆ ಇದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ನೀಡುವಂತೆ ರಾಜಕೀಯ ಮೀಸಲು ನೀಡಲು ಸಾಧ್ಯವಿಲ್ಲ. ಯಾವ ಜಾತಿಗಳಿಗೆ ರಾಜಕೀಯ ಪ್ರಾತಿನಿಧ್ಯವಿಲ್ಲವೋ ಅಂತಹ ಜಾತಿಗಳಿಗೆ ಮೀಸಲು ಕಲ್ಪಿಸಬೇಕಾಗುತ್ತದೆ. ಆದರೆ, ಬಿಬಿಎಂಪಿ ವಾರ್ಡ್ ಮೀಸಲು ನಿಗದಿಯಲ್ಲಿ ನಿಯಮ ಪಾಲನೆಯಾಗಿಲ್ಲ. ಭಕ್ತವತ್ಸಲ ಸಮಿತಿ ಸಹ ಸೂಕ್ತ ವಿಧಾನ ಅನುಸರಿಸಿಲ್ಲ. ಇದುವರೆಗೆ ಯಾವ ಯಾವ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂಬ ಪಟ್ಟಿ ಒದಗಿಸಿಲ್ಲ. ಆದ್ದರಿಂದ, ಬಿಬಿಎಂಪಿ ವಾರ್ಡ್‌ವಾರು ಮೀಸಲು ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಅವರು ಅರ್ಜಿದಾರರು ಕೋರಿದ್ದಾರೆ.

ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಸೆಪ್ಟೆಂಬರ್‌ 22ಕ್ಕೆ ಮತದಾರರ ಪಟ್ಟಿ ಅಂತಿಮಗೊಳಿಸಲಾಗುವುದು. ಆನಂತರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 16ಕ್ಕೆ ಮುಂದೂಡಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *