ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಸ್ಥಳೀಯರ ಆಕ್ರೋಶ

ದೊಡ್ಡಬಳ್ಳಾಪುರ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಗಳು ಸಾವಿನ ವಾಹನಗಳಾಗುತ್ತಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಮೂಗೇನಹಳ್ಳಿ ತಿರುವಿನ ಬಳಿ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸಾವಿಗೀಡಾಗಿರುವ ಘಟನೆ ಇಂದು (ಸೆಪ್ಟಂಬರ್ 04) ಬೆಳಿಗ್ಗೆ ನಡೆದಿದೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಮೃತ ಯುವಕನನ್ನು ಮಾವಿನಕುಂಟೆ ಗ್ರಾಮದ ರಾಜು (30 ವರ್ಷ) ಎಂದು ಗುರುತಿಸಲಾಗಿದೆ.

ದುರ್ಘಟನೆಯಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದ ಕಸದ ಲಾರಿ ಕೂಡ ಮುಗುಚಿ ಬಿದ್ದಿದೆ. ಬೈಕ್​ಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬರುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ. ಅಧಿಕಾರಿಗಳು ಬಂದು‌ ಮಾತನಾಡುವವರೆಗೂ ಸ್ಥಳದಿಂದ ಶವ ತೆಗೆಯದಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಸ್ಥಳೀಯರು ಶಾಸಕರ ಬಳಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರು ಸಹ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *