ವೈದ್ಯಕೀಯ ಸೌಕರ್ಯಗಳ ಅಭಿವೃದ್ಧಿಗಾಗಿ ರೂ.1 ಸಾವಿರ ಕೋಟಿ ಅನುದಾನಕ್ಕಾಗಿ ಬಿಬಿಎಂಪಿ ಮನವಿ

ಬೆಂಗಳೂರು: ಬೃಹತ್‌ ನಗರದಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಿಕೊಳ್ಳಲು ರೂ.1 ಸಾವಿರ ಕೋಟಿ ಅನುದಾನದ ಅವಶ್ಯಕತೆ ಇದೆ. ಸರಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ಬಿಬಿಎಂಪಿಯು ಸರಕಾರಕ್ಕೆ ಮನವಿ ಮಾಡಿದೆ.

ಅನುದಾನಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದರು. ಅವರು ಇಂದು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪುನರ್ ನವೀಕರಣಗೊಳ್ಳುತ್ತಿರುವ ಕೆ.ಆರ್.ಮಾರ್ಕೆಟ್ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿ: ಅಪಾಯಕ್ಕೆ ಆಹ್ವಾನ ನೀಡುತ್ತಿವೆ ರಸ್ತೆಗುಂಡಿಗಳು!, ಬಿಬಿಎಂಪಿ ಕಚೇರಿ ಮುಂದಿದೆ ದೊಡ್ಡದಾದ ರಸ್ತೆಗುಂಡಿ

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವುದು 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ. ಅಲ್ಲದೆ, 6 ರೆಫರಲ್ ಆಸ್ಪತ್ರೆಗಳು ಮಾತ್ರಯಿದೆ. ಬಹುತೇಕ ಆಸ್ಪತ್ರೆಗಳಲ್ಲಿ ಪ್ರಸೂತಿ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲು ಬಳಸಿಕೊಳ್ಳಲಾಗುತ್ತಿದೆ.

ವೈದ್ಯಕೀಯ ಸೇವೆ ಹೆಚ್ಚಳ ಮಾಡುವ ಉದ್ದೇಶದಿಂದ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ. ಸರ್ಕಾರದಿಂದ ರೂ. 1 ಸಾವಿರ ಕೋಟಿ ಅನುದಾನ ಬಿಡುಗಡೆಯಾದಲ್ಲಿ ಎಲ್ಲಾ ಆಸ್ಪತ್ರೆಗಳನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವುದರ ಜತೆಗೆ ಆಸ್ಪತ್ರೆ ಇಲ್ಲದ ಕಡೆ ಹೊಸ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು. ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು.

ಇದನ್ನು ಓದಿ: ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳಿಲ್ಲ: ಇನ್ನೂ ಒಂದೂವರೆ ವರ್ಷ ಚುನಾವಣೆ ಇಲ್ಲ

ನವೀಕೃತ ಕೆ.ಆರ್.ಮಾರ್ಕೆಟ್‍ಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯವಸ್ಥಿತವಾಗಿ ವ್ಯಾಪಾರ ಮಾಡಲು ಸಮ್ಮತಿಸಿದರೆ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಗುವುದು. ಎಲ್ಲೆಂದರಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳು , ಕೆಲವು ತಾಂತ್ರಿಕ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಕಾಮಗಾರಿಗಳಿಗೆ ವೇಗ ನೀಡಲು ತೀರ್ಮಾನಿಸಲಾಗುವುದು. ಅವಿನ್ಯೂ ರಸ್ತೆ ಹಾಗೂ ಕೆ.ಆರ್.ಮಾರ್ಕೆಟ್ ಪುನರ್ ನವೀಕರಣ ಕಾರ್ಯಗಳನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *