ಬಿ ಸಿ ರೋಡ್ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಸಮಾನ ಮನಸ್ಕರು, ಟೋಲ್ ಗೇಟ್ ವಿರೋಧಿ ಹೋರಾಟ ಮತ್ತಷ್ಟು ಬಲ
ಮಂಗಳೂರು : ಅಂತರದ ನಿಯಮ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ “ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ” ಹಮ್ಮಿಕೊಂಡಿದ್ದ ‘ಸಾಮೂಹಿಕ ಧರಣಿ’ ಅಪಾರ ಸಂಖ್ಯೆಯ ಜನರ ಭಾಗವಹಿಸುವಿಕೆಯೊಂದಿಗೆ ಯಶಸ್ವಿಯಾಗಿ ನಡೆಯಿತು. ಜಾತ್ಯಾತೀತ ಪಕ್ಷಗಳು, ಸಂಘಟನೆಗಳು, ರೈತ, ದಲಿತ, ಕಾರ್ಮಿಕ, ಸಾರಿಗೆ ರಂಗದ ಸಂಘಟನೆಗಳಿಗೆ ಸೇರಿದ ದೊಡ್ಡ ಸಂಖ್ಯೆಯ ಪ್ರತಿನಿಧಿಗಳು, ಸಾರ್ವಜನಿಕರು ಧರಣಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸುಳ್ಯ ದಿಂದ ಮೂಲ್ಕಿ ಯವರಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಮುಖಂಡರು ಧರಣಿಯಲ್ಲಿ ಭಾಗವಹಿಸಿ ಗಮನ ಸೆಳೆದರು.
ಹೋರಾಟ ಸಮಿತಿಯ ಗೌರವಾಧ್ಯಕ್ಷರು, ಮಾಜಿ ಸಚಿವರಾದ ಬಿ ರಮಾನಾಥ ರೈ ಭಾಷಣದ ಮೂಲಕ ಧರಣಿಯನ್ನು ಉದ್ಘಾಟಿಸಿದರು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ ಹೋರಾಟದ ದಿಕ್ಸೂಚಿ ಭಾಷಣ ಮಾಡಿದರು. ಸಾಮಾಜಿಕ ಕಾರ್ಯಕರ್ತರು, ಬರಹಗಾರರಾದ ಎಮ್ ಜಿ ಹೆಗ್ಡೆ, ನ್ಯಾಯವಾದಿ ಅಶ್ವಿನ್ ಕುಮಾರ್ ರೈ, ಬಂಟ್ವಾಳ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಸುರೇಶ್ ಕುಮಾರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಮ್ ಎಸ್ ಮುಹಮ್ಮದ್, ಮಾಜಿ ಸದಸ್ಯರುಗಳಾದ ತುಂಬೆ ಪ್ರಕಾಶ್ ಚಂದ್ರ ಶೆಟ್ಟಿ, ಸಾಹುಲ್ ಹಮೀದ್, ರೈತ ನಾಯಕ ರೂಪೇಶ್ ರೈ, ಸಿಐಟಿಯು ಜಿಲ್ಲಾಧ್ಯಕ್ಷ ಬಿ ಎಮ್ ಭಟ್, ಐಟಕ್ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆರಿಂಜೆ, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ರಾಮಣ್ಣ ವಿಟ್ಲ, ಪುತ್ತೂರಿನ ಹಿರಿಯ ಮುಂದಾಳು ಕಾವು ಹೇಮನಾಥ ಶೆಟ್ಟಿ, ಯುವ ಮುಂದಾಳು ಸುಹೈಲ್ ಕಂದಕ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಮಮತಾ ಗಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ :ಪಶು-ಪಕ್ಷಿ ಲೋಕದ ವಿಸ್ಮಯಗಳು: ಸಂಚಿಕೆ-5
ಹೋರಾಟ ಸಮಿತಿಯ ಸಂಚಾಲಕರುಗಳಾದ ಬಿ ಶೇಖರ್, ಮೋಹನ್ ಶೆಟ್ಟಿ ಪಂಜಿಕಲ್ಲು, ಮುಖಂಡರಾದ ಬೇಬಿ ಕುಂದರ್ ಕಾರ್ಯಕ್ರಮ ನಿರ್ವಹಿಸಿದರು. ಬಿ ಶೇಖರ್ ಮನವಿ ವಾಚನ ಮಾಡಿದರು. ಯುವ ನಾಯಕ ಲುಕ್ಮಾನ್ ಬಂಟ್ವಾಳ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರೈತ ನಾಯಕ ರಾದ ಶ್ರೀಧರ್ ಶೆಟ್ಟಿ, ಕೆ ಯಾದವ ಶೆಟ್ಟಿ, ವಿವಿಧ ಸಂಘಟನೆಗಳ ಪ್ರಮುಖರಾದ ಅಬ್ಬಾಸ್ ಅಲಿ, ಸದಾಶಿವ ದಾಸ್, ಪಿಯೂಸ್, ಲಾವಣ್ಯ ಬಳ್ಳಾಲ್, ಅಶ್ರಫ್ ಕಲ್ಲೇಗ, ವಿ ಕುಕ್ಯಾನ್ ಸಹಿತ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಸಮುದಾಯದ ಶ್ಯಾಮರಾಜ್ ಪಟ್ರಮೆ, ಈಶ್ವರಿ ಪದ್ಮುಂಜ, ಜಯಶ್ರೀ ಟೋಲ್ ವಿರೋಧಿ ಹಾಡುಗಳನ್ನು ಹಾಡಿದರು.
ಇದನ್ನೂ ನೋಡಿ : ಗಾಂಧಿ, ನೆಹರೂ ವಿಚಾರಗಳ ಮೇಲೆ ದಾಳಿ: ಉಗ್ರಪ್ಪ ಆರೋಪJanashakthi Media
