ಬೆಂಗಳೂರು: ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದ ಆರು ತಂಡಗಳು ನಗರದ ವೈಯಾಲಿಕಾವಲ್ ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿರುವ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ.
ಏಕಕಾಲಕ್ಕೆ 35ಕ್ಕೂ ಹೆಚ್ಚು ಲೋಕಾಯುಕ್ತರು ಅಧಿಕಾರಿಗಳು 6 ತಂಡದಲ್ಲಿ ಬಿಡಿಎ ಕಚೇರಿಯ ನಾಲ್ಕು ಬಾಗಿಲು ಮುಚ್ಚಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ ಒಳಗಿದ್ದ ಪ್ರತಿಯೊಬ್ಬರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕಚೇರಿ ಆವರಣದಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಟೇಬಲ್ ಹಾಕಿಕೊಂಡು ಸಾರ್ವಜನಿಕರಿಂದ ದೂರು ಸ್ವೀಕರಿಸುತ್ತಿದ್ದಾರೆ.
ಇದನ್ನು ಓದಿ: ಬಿಡಿಎ ಬಹುಕೋಟಿ ರೂಪಾಯಿ ಹಗರಣ: ಪ್ರಕರಣ ದಾಖಲು
ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಸೇರಿದಂತೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲೇ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮೂಲೆ ನಿವೇಶನ ಹಂಚಿಕೆ ಹಾಗೂ ಲೇಔಟ್ ನಿರ್ಮಾಣ ಪ್ರಕ್ರಿಯೆಯಲ್ಲಿಯೂ ಬಿಡಿಎ ಸಾಕಷ್ಟು ಅವ್ಯವಹಾರದಲ್ಲಿ ತೊಡಗಿದೆ ಎಂಬ ಆರೋಪಗಳು ಸಹ ಕೇಳಿಬಂದಿವೆ. ಪರಿಹಾರ ನೀಡುವಲ್ಲಿಯೂ ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ