ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ: ಶರಣಪ್ರಕಾಶ್ ಪಾಟೀಲ್

ಲಬುರಗಿ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ `ಟಾಸ್ಕ್ ಪೋರ್ಸ್’ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಎಲ್ಲಾ ತಾಲೂಕಿನ ಪಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಶರಣಪ್ರಕಾಶ್‌ ಪಾಟೀಲ್‌ , ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್‌ವೆಲ್‌ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮಕೈಗೊಂಡು ವರದಿ ಸಲ್ಲಿಸಬೇಕು ಎಂದರು.

ಇದನ್ನೂ ಓದಿ: ವಿಜಯಪುರ| ಬಸ್ ನಿಲ್ದಾಣದಲ್ಲಿ ಬೈಕ್‌ ಪಾರ್ಕಿಂಗ್;‌ ಚಾಲಕರ ಪರೆದಾಟ

ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್‌ವೆಲ್ ಕೊರೆಸಿ, ಇತರೆ ಬೋರ್‌ವೆಲ್‌ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ನನಗೆ ವರದಿ ಸಲ್ಲಿಸಬೇಕು. ಹೆಚ್ಚು ಬಿಸಿಲಿದೆ ಎಂದು ಮನೆಯಲ್ಲಿಯೇ ಕುಳಿತು ಮೊಬೈಲ್‌ನಲ್ಲಿ ವರದಿ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ನೋಡಿ: ದುಡಿಯುವ ಜನರಿಗೆ ದುಡ್ಡಿಲ್ಲ! ಆದರೆ ಶಾಸಕರ ವೇತನ ದುಪ್ಪಟ್ಟಾಯ್ತು!! ಅಂಥಾ ಕಷ್ಟ ಅವರಿಗೇನಿತ್ತು? Janashakthi Media

Donate Janashakthi Media

Leave a Reply

Your email address will not be published. Required fields are marked *