ಮಂಗಳೂರ : ಇಂದು ತೊಕ್ಕೋಟುನಲ್ಲಿ ಜರುಗಿದ ಕೋಟೆಕಾರ್ ಸರ್ಕಲ್ ಬೀಡಿ ಲೇಬರ್ ಯೂನಿಯನ್ ನ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸುತ್ತಾ ಮಾತನಾಡಿದ ಜೆ ಬಾಲಕೃಷ್ಣ ಶೆಟ್ಟಿ 2018ರಿಂದ ಬೀಡಿ ಕಾರ್ಮಿಕರಿಗೆ ಬಾಕಿ ಇರಿಸಿಕೊಂಡಿರುವ ತುಟ್ಟಿಭತ್ತೆಯ ಭಾಗವಾಗಿ ಪ್ರತೀ ಸಾವಿರ ಬೀಡಿಗೆ ರೂ 7 ರಂತೆ ಕೊಡುವುದಾಗಿ ಒಪ್ಪಿಕೊಂಡಿರುವ ಬೀಡಿ ಮಾಲಕರು ಈ ಪಾವತಿಯನ್ನು ವಿಳಂಬಿಸುತ್ತಿದ್ದಾರೆ.ಕಳೆದ ಎಪ್ರಿಲ್ ನಲ್ಲಿ ಪಾವತಿಸುವುದಾಗಿ ಭರವಸೆ ನೀಡಿದ ಮಾಲಕರು ಸಪ್ಟೆಂಬರ್ ಆದರೂ ಇನ್ನೂ ಪಾವತಿ ಮಾಡಿರುವುದಿಲ್ಲ.ಮಾತ್ರವಲ್ಲ 2024ರ ಕನಿಷ್ಠ ಕೂಲಿಯನ್ನೂ ನೀಡಿರುವುದಿಲ್ಲ. ಈ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನ ಆಗಲಿಲ್ಲ.ಅದ್ದರಿಂದ ಅಕ್ಟೋಬರ್ 7ರಿಂದ ಬೀಡಿ ಕಂಪೆನಿಗಳ ಮುಂದೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದೆಂದು ಆಗ್ರಹಿಸಿದರು. ಮಂಗಳೂರ
ಇದನ್ನೂ ಓದಿ: ಭೂ ಸ್ವಾಧೀನ ಕೈಬಿಡುವುದಾಗಿ ಘೋಷಿಸಿದರೂ ರೈತರಿಗೆ ನೋಟಿಸ್; ಹೋರಾಟಗಾರರು ಪ್ರತಿಭಟನೆ
CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಶುಭಕೋರಿ ಮಾತನಾಡುತ್ತಾ, ಅವಿಭಜಿತ ದ.ಕ.ಜಿಲ್ಲೆಯ ಆರ್ಥಿಕತೆಯ ಜೀವನಾಡಿಯಾದ ಬೀಡಿ ಉದ್ಯಮದ ಬಿಕ್ಕಟ್ಟನ್ನು ಬಂಡವಾಳವನ್ನಾಗಿಸಿದ ಬೀಡಿ ಮಾಲಕರು ಕಾರ್ಮಿಕರಿಗೆ ಭಾರೀ ಅನ್ಯಾಯವನ್ನು ಎಸಗುತ್ತಿದ್ದಾರೆ. ಮಾತ್ರವಲ್ಲದೆ ಆಳುವ ವರ್ಗಗಳಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳೂ ಕೂಡ ಕಳೆದ ಹಲವಾರು ವರ್ಷಗಳಿಂದ ಬೀಡಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡು ದಿವ್ಯಮೌನ ವಹಿಸಿದೆ ಎಂದು ಆರೋಪಿಸಿದರು.

ವೇದಿಕೆಯಲ್ಲಿ ಬೀಡಿ ಕಾರ್ಮಿಕರ ಸಂಘಟನೆಯ ಹಿರಿಯ ಮುಖಂಡರಾದ ಸುಕುಮಾರ್ ತೊಕ್ಕೋಟು,ಜಯಂತ ನಾಯಕ್, ಸುಂದರ ಕುಂಪಲ,ಪ್ರಮೋದಿನಿ ಕಲ್ಲಾಪು, ರೈತ ನಾಯಕರಾದ ಕೃಷ್ಣಪ್ಪ ಸಾಲ್ಯಾನ್,ಬೀಡಿ ಕಾರ್ಮಿಕರ ನಾಯಕರಾದ ವಿಲಾಸಿನಿ ತೊಕ್ಕೋಟು, ರೋಹಿದಾಸ್ ಭಟ್ನಗರ,ಜನಾರ್ಧನ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಹಿರಿಯ ಬೀಡಿ ಕಾರ್ಮಿಕರ ಮುಖಂಡರಾದ ಪದ್ಮಾವತಿ ಶೆಟ್ಟಿಯವರು ವಹಿಸಿದ್ದರು.ಮಹಾಸಭೆಯ ಬೀಡಿ ಕಾರ್ಮಿಕರ ಬದುಕಿಗೆ ಸಂಬಂಧಿಸಿ ಹಲವಾರು ನಿರ್ಣಯಗಳನ್ನು ಕೈಗೊಂಡಿತು.ಮುಂದಿನ ಅವಧಿಗೆ ಕೋಟೆಕಾರ್ ಸರ್ಕಲ್ ಬೀಡಿ ಲೇಬರ್ ಯೂನಿಯನ್ ನ ನೂತನ ಸಮಿತಿಯನ್ನು ಮಹಾಸಭೆಯು ಅಂಗೀಕರಿಸಿತು.
ಇದನ್ನೂ ನೋಡಿ: ಚುನಾವಣಾ ಆಯೋಗ ಮತ್ತು ವಿಶ್ವಾಸಾರ್ಹತೆ ದೂರ ಬಲು ದೂರ… Janashakthi Media
