ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕಕ್ಕೆ ಹಾಗೂ ಬಸವಣ್ಣನ ಫೋಟೊಗೆ ಸಗಣಿ ಹಚ್ಚಿದ್ದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಎಂಬುವವರು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೊನ್ನೆ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ಮೆರೆದಿದ್ದರು. ನಂತರ ಬಸವಣ್ಣನ ಭಾವಚಿತ್ರಕ್ಕೆ ಸಗಣಿ ಬಳಿದಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120B ರಡಿ ಕೇಸ್ ದಾಖಲಾಗಿದೆ.
ಜಿಲ್ಲೆಯಲ್ಲಿ ಎಮ್‌ಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರ್ನಾಟಕ ಜನತೆ ಕೆಂಡಾಮಂಡಲವಾಗಿದೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು, ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಎಮ್‌ಇಎಸ್ ಸಂಘಟನೆ ನಿಷೇಧಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ.