ಬೆಳಗಾವಿ | ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ನೆಟ್ಟ ಯುವಕರಿಗೆ ಥಳಿತ

ಬೆಳಗಾವಿ: ಮರಾಠ ರಾಜ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರನ್ನು ಥಳಿಸಿರುವ ಘಟನೆ  ಜಿಲ್ಲೆಯ ಸಂಕೇಶ್ವರದಲ್ಲಿ ನಡೆದಿದೆ. ಘಟನೆ ನಂತರ ನಗರವು ಉದ್ವಿಗ್ನಗೊಂಡಿದ್ದು, ಈ ಸಂಬಂಧ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ದಿನಗಳ ಹಿಂದೆ ಸಂಕೇಶ್ವರ ಪಟ್ಟಣದ ಸಮೀಪದ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಐಎಎನ್‌ಎಸ್‌ ವರದಿ ಉಲ್ಲೇಖಿಸಿದೆ. ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಗುಂಪೊಂದು ಕೂಡಲೇ ತೆರವು ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದನ್ನು ನಿರಾಕರಿಸಿದಾಗ ಕನ್ನಡ ಧ್ವಜ ಅಳವಡಿಕೆಗೆ ಬೆಂಬಲ ನೀಡಿದ ಯುವಕರ ಮೇಲೆ ಗುಂಪು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸಂಸತ್ ಭವನ ಅಲ್ಲ, ‘ಸಸ್ಪೆಂಡ್ ಭವನ’ | ಒಟ್ಟು 141 ಸಂಸದರು ಅಮಾನತು!

ಇದರ ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಕೊನೆಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಅವರ ಪ್ರತಿಮೆಗಳನ್ನು ಒಟ್ಟಿಗೆ ಸ್ಥಾಪಿಸುವ ಪ್ರಸ್ತಾವನೆ ಇತ್ತು. ಆದಾಗ್ಯೂ, ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪ್ರತಿಮೆಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಸ್ಥಾಪಿಸಲು ಬೇಡಿಕೆ ಇಡಲಾಗಿತ್ತು. ಈ ಬೆಳವಣಿಗೆಗಳ ನಡುವೆ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜ ಅಳವಡಿಸಿದ್ದು ವಾಗ್ವಾದಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ವಿಡಿಯೊ ನೋಡಿ: ಜನಸಾಮಾನ್ಯರ ನಡಿಗೆ ಅಭಿವೃದ್ಧಿಯ ಕಡೆಗೆ : ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ

Donate Janashakthi Media

Leave a Reply

Your email address will not be published. Required fields are marked *