ಬೆಳಗಾವಿ: ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ ಸಾಹು ನೇತೃತ್ವದ ತಂಡ ಕೇಂದ್ರ ತಂಡ ಜಿಲ್ಲೆಯಲ್ಲಿ ಬರ ಅಧ್ಯಯನ ಆರಂಭಿಸಿದೆ. ಬರ ಅಧ್ಯಯನ
ಇದನ್ನೂ ಓದಿ:ಬರಪೀಡಿತ ತಾಲೂಕುಗಳನ್ನು ಘೋಷಿಸಲು ಕೇಂದ್ರದ ನಿಯಮ ಬದಲಾಗಬೇಕಿದೆ: ಸಚಿವ ಕೃಷ್ಣ ಬೈರೇಗೌಡ
ಇಲ್ಲಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ ಸಭೆ ನಡೆಸಿದೆ ತಂಡ, ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಮಾಹಿತಿ ಕಲೆಹಾಕಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲೆಯ 15 ತಾಲ್ಲೂಕುಗಳಲ್ಲಿ ಬಿತ್ತನೆ ಸಂದರ್ಭ ಮೂರು ವಾರಕ್ಕಿಂತ ಹೆಚ್ಚು ಮಳೆಯಾಗಿರಲಿಲ್ಲ. ಹಾಗಾಗಿ ಬರ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ, ಖಾನಾಪುರ ಹೊರತುಪಡಿಸಿ, 13 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ ಎಂದು ತಿಳಿಸಿದರು.
ಬೆಳೆಹಾನಿ, ಕುಡಿಯುವ ನೀರಿನ ಸಮಸ್ಯೆ, ಮೇವು ಕೊರತೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ರಾಜ್ಯ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಮಾತನಾಡಿದರು.
ಇದನ್ನೂ ಓದಿ:ರಾಜ್ಯದಲ್ಲಿ ಬರದಿಂದ 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡ
ಜಿಲ್ಲೆಯ ಬರ ಪರಿಸ್ಥಿತಿ ಪ್ರತಿಬಿಂಬಿಸುವ ಛಾಯಚಿತ್ರಗಳನ್ನು ಕೇಂದ್ರ ಅಧ್ಯಯನ ತಂಡ ವೀಕ್ಷಿಸಿತು. ಎಣ್ಣೆ ಬೀಜ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಕೆ.ಪೊನ್ನುಸ್ವಾಮಿ, ಕೇಂದ್ರ ಆರ್ಥಿಕ ವೆಚ್ಚ ಇಲಾಖೆ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯಾ, ನೀತಿ ಆಯೋಗದ ಸಂಶೋಧನಾ ಅಧಿಕಾರಿ ಶಿವಚರಣ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಇದ್ದರು.
ಇಲ್ಲಿಂದ ಬೈಲಹೊಂಗಲ, ಸವದತ್ತಿ, ಯರಗಟ್ಟಿ, ರಾಮದುರ್ಗ ತಾಲ್ಲೂಕುಗಳಿಗೆ ತಂಡದ ಸದಸ್ಯರು ತೆರಳಿ ಬರ ಪರಿಸ್ಥಿತಿ ಅವಲೋಕಿಸಲಿದ್ದಾರೆ. ನಂತರ ವಿಜಯಪುರ ಜಿಲ್ಲೆಗೆ ತೆರಳಿದ್ದಾರೆ.
ವಿಡಿಯೋ ನೋಡಿ:ಪರ್ಯಾಯ ಕೃಷಿ ಧೋರಣೆಗಳು: ಬಿಜೆಪಿ ರೈತ ಪರ ಅಲ್ಲ – ಡಾ. ಪ್ರಕಾಶ್ ಕಮ್ಮರಡಿ Janashakthi Media