ಸಂವಿಧಾನದಲ್ಲಿ ಸರ್ಕಾರ ನಂಬಿಕೆ ಇಟ್ಟಿದೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು:ತಮ್ಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯ ಹಾಗೂ ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರದಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದರು.

ನಾವು ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಬೇಕು ಎಂದು ಕರೆ ನೀಡಿದರು.

ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. , ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನು ಓದಿ : ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲ್‌ ಡಿಕ್ಕಿ; 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,15 ಮಂದಿ ಸಾವು

ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುವುದಾಗಿ  ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮೌಲ್ವಿಗಳು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನು ನೋಡಿ : ನಿರಂಜನ 100 ಚಿರಸ್ಮರಣೆ | ಕಯ್ಯೂರು ವೀರರ ಕಥೆJanashakthi Media

Donate Janashakthi Media

Leave a Reply

Your email address will not be published. Required fields are marked *