ಹಾಸನ: ಬೇಲೂರು ಬಿಇಒ ರಾಜೇಗೌಡನನ್ನು ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಡಿಡಿಪಿಐ ವರದಿ ಆಧರಿಸಿ ಬಿಇಒ ರಾಜೇಗೌಡನನ್ನು ಅಮಾನತು ಗೊಳಿಸಲಾಗಿದೆ. ಭ್ರಷ್ಟಾಚಾರ, ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದು ಆರೋಪಗಳು ಸಾಬೀತು ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಉದ್ಯಮಿ ಗೌತಮ್ ಅದಾನಿಗೆ ಕ್ಲೀನ್ ಚಿಟ್; ತನಿಖೆಯನ್ನು ಮುಂದುವರಿಸುವುದು ಅಗತ್ಯ: ಕಾಂಗ್ರೆಸ್ ಕಿಡಿ
ಅಲ್ಲದೇ ಇತ್ತೀಚಿಗೆ ಶಾಸಕ ಎಚ್ ಕೆ ಸುರೇಶ್ ಜೊತೆಗೆ ರಾಜೇಗೌಡ ವಾಗ್ವಾದ ನಡೆಸಿದ್ದ ಇದೀಗ ಬೇಲೂರು ಬಿಇಓ ರಾಜೇಗೌಡನನ್ನ ಅಮಾನತುಗೊಳಿಸಲಾಗಿದೆ.
ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು | ಬಂಗ್ಲೆ ಗುಡ್ಡೆ ಪ್ರದೇಶದಲ್ಲಿ SIT ಶೋಧ; ಮಾನವನ ಅವಶೇಷಗಳು ಪತ್ತೆ! Janashakthi Media
