ಬೆಂ-ಮೈ ಎಕ್ಸ್‌ಪ್ರೆಸ್‌ವೇ – ಟೋಲ್‌ ಸಂಗ್ರಹ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಮನಗರ: ಮೊನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರಿಂದ ಉದ್ಘಾಟಿಸಲ್ಪಟ್ಟ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹವನ್ನು ವಿರೋಧಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು.

ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ “ದುಡ್ಡು ಕೊಡ್ತೀವಿ ಅಂತಾ ಕರೆಯಿಸಿ ಹಣ ಕೊಡ್ಲಿಲ್ಲ ” ಮೋದಿ ಕಾರ್ಯಕ್ರಮಕ್ಕೆ ಬಂದಿದ್ದವರಿಂದ ಆರೋಪ

ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.

ಟೋಲ್ ಸಂಗ್ರಹ ವಿರೋಧಿಸಿ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುವ ಮೂಲಕ ಮೂರು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದೊಯ್ಯಲಾಯಿತು.
ಇದೇ ತಿಂಗಳ 12ರಂದು ಪ್ರಧಾನಿ ನರೇಂದ್ರಮೋದಿ ಅವರು  ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಲೋಕಾರ್ಪಣೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ್ದರು.

ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಹಗರಣ ಸಿಬಿಐ ತನಿಖೆಗೆ ಶಾಸಕ ಮಂಜುನಾಥ್‌ ಆಗ್ರಹ

ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಜನರನ್ನು ತಮ್ಮತ್ತ ಸೆಳೆಯಲು ಬಿಜೆಪಿಯು ರಾಷ್ಟ್ರೀಯ ನಾಯಕರುಗಳನ್ನು ಕರೆಸುವ ಮೂಲಕ  ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.ಉದ್ಘಾಟನೆ, ಶಂಕು ಸ್ಥಾಪನೆಗಳ ನೆಪದಲ್ಲಿ ತರಾತುರಿಯಲ್ಲಿ ಕೆಲಸಗಳನ್ನು ಮಾಡುವ ಮೂಲಕ ಸಾಮಾನ್ಯ  ಬಡಜನರು, ವಿದ್ಯಾರ್ಥಿಗಳತ್ತ ಗಮನ ಕೊಡುತ್ತಿಲ್ಲ ಎಂದು  ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.

ಈ  ಹಿಂದೆಯೂ ಕೂಡ ಮಂಗಳೂರಿನ ಸುರತ್ಕಲ್‌ ಎನ್‌ಐಟಿಕೆ ಸಮೀಪದ ಟೋಲ್‌ಗೇಟ್‌ ದುಪ್ಪಟ್ಟು ದರ ವಸೂಲಿ  ಮಾಡುತ್ತಿದ್ದಾರೆಂದು ಕೂಡಲೇ ಟೋಲ್‌ಗೇಟ್‌ ಅನ್ನು ರದ್ದುಗೊಳಿಸುವಂತೆ ಪ್ರತಿಭಟನೆ ಮಾಡಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *