ಬೆಂಗಳೂರು: ಮಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಬಳಿಕೆ ಇಂದು ಬೆಳಿಗ್ಗೆ ದೆಹಲಿಯಲ್ಲಿ ಬಿಜೆಪಿ ಪಕ್ಷದ ಸಂಸದೀಯ ಮಂಡಳಿ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸುತ್ತಿರುವ ಕೇಂದ್ರದ ವೀಕ್ಷಕರ ತಂಡ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಸಂಜೆ 7 ಗಂಟೆಗೆ ನಿದಿಪಡಿಸಲಾಗಿದೆ ಎಂದು ಬಿಜೆಪಿ ಕಚೇರಿಯಿಂದ ಅಧಿಕೃತ ಮಾಹಿತಿ ಪ್ರಕಟವಾಗಿದೆ.
ರೇಸ್‌ಕೋರ್ಸ್ ರಸ್ತೆಯ ಕ್ಯಾಪಿಟಲ್ ಹೋಟೆಲ್‌ನಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ನೇಮಕ ಮಾಡಿರುವ ವೀಕ್ಷಕರಾದ ಕೇಂದ್ರ ಸಚಿವರಾದ ಕಿಷನ್ ರೆಡ್ಡಿ ಮತ್ತು ಧರ್ಮೆಂದ್ರ ಪ್ರಧಾನ್ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಇದನ್ನು ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ
ಹಂಗಾಮಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೌನ ಬಿಜೆಪಿ ಹೈಕಮಾಂಡ್‌ಗೆ ಒಂದು ರೀತಿಯಲ್ಲಿ ಎಚ್ಚರಿಕೆ ಸಂದೇಶ ಎಂಬಂತೆ ವಿಶ್ಲೇಷಣೆ ಮಾಡಲಾಗುತ್ತಿದೆ. ಆದಷ್ಟು ಬೇಗನೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧಾರಿಸಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಪ್ರಮುಖವಾಗಿ ಮೂರ‍್ನಾಲ್ಕು ಹೆಸರುಗಳು ಕೇಳಿ ಬರುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯ ಬಳಿಕ ನೂತನ ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಎಂದು ತಿಳಿಯಲಿದೆ. ಸಭೆಯಲ್ಲಿ ಚರ್ಚೆಯ ಬಳಿಕ ಹಿರಿಯ ಶಾಸಕರು ಅನುಮೋದಿಸಲಿದ್ದಾರೆ.
ಇಂದಿನ ಶಾಸಕಾಂಗ ಸಭೆಯ ಬಳಿಕ ಮುಖ್ಯಮಂತ್ರಿ ಯಾರು ಎಂದು ಅಧಿಕೃತಗೊಂಡರೆ ಗುರುವಾರವೇ ನೂತನ ಮುಖ್ಯಮಂತ್ರಿಯ ಪದಗ್ರಹಣ ನಡೆಯಲಿದೆ.