ಬೆಂಗಳೂರು: ಪಟಾಕಿ ಸಿಡಿದು 60 ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರ ಕಣ್ಣಿಗೆ ಹಾನಿ

ಬೆಂಗಳೂರು: ಭಾನುವಾರದಿಂದ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಬೆಳಕಿನ ಹಬ್ಬ ದೀಪಾವಳಿ ಅಂದರೆ ಸಡಗರ ಸಂಭ್ರಮ ಮನೆ ಮಾಡಿರುತ್ತೆ. ಆದರೆ ಜನರ ಬಾಳಲ್ಲಿ ಬೆಳಕಾಗಬೇಕಾಗಿದ್ದ ಇದೇ ದೀಪಾವಳಿ ಹಬ್ಬ ಕೆಲವರ ಬಾಳನ್ನ ಕತ್ತಲಾಗಿಸುತ್ತಿದೆ.

ಭಾನುವಾರದಿಂದ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ.

ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ರೀರಾಂಪುರದಲ್ಲಿ 18 ವರ್ಷದ ಯುವಕ ಭಾನುವಾರ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು ಆತನ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಧರ್ಮಾವರಂನ 10 ವರ್ಷದ ಬಾಲಕಿ ಮತ್ತು ಬೆಂಗಳೂರಿನ 22 ವರ್ಷದ ಯುವಕಿಗೂ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ.

ಇದನ್ನೂ ಓದಿ: ವಿದ್ಯುತ್ ಕಳವು| ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರೂ. ದಂಡ ಪಾವತಿಸಲು ಸೂಚನೆ!

ಇದರಿಂದಾಗಿ ಅವರಿಗೆ ದೃಷ್ಟಿ ಸಮಸ್ಯೆ ಎದುರಾಗಿದೆ. ಮಿಂಟೋ ಆಸ್ಪತ್ರೆಯ ನಿರ್ದೇಶಕ ಜಿ.ನಾಗರಾಜು ಮಾತನಾಡಿ, ಮೂವರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೀರ್ಘಾವಧಿ ಚಿಕಿತ್ಸೆ ಅಗತ್ಯವಿದೆ. ಸೋಮವಾರ ಸಂಜೆಯವರೆಗೆ ಮಿಂಟೋದಲ್ಲಿ ಒಟ್ಟು ಒಂಬತ್ತು ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನವೆಂಬರ್ 12 ರಂದು ಬಿಹಾರದಲ್ಲಿ ಬಿಹಾರಿ ಕುಟುಂಬ ಮೂಲದ ಆರು ವರ್ಷದ ಬಾಲಕ ಕೂಡ ಪಟಾಕಿ ಸಿಡಿಸಿ ಗಾಯಗೊಂಡಿದ್ದು ಬಾಲಕನಿಗೆ ಸ್ಥಳೀಯ ಚಿಕಿತ್ಸಾಲಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಅವನನ್ನು ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಲಾಗಿದೆ ಎಂದರು.

ಆಸ್ಪತ್ರೆಯ ಅಧ್ಯಕ್ಷ ರೋಹಿತ್ ಶೆಟ್ಟಿ ಮಾತನಾಡಿ, ಮಗು ದೃಷ್ಟಿ ಕಳೆದುಕೊಳ್ಳಬಹುದು ಎಂಬ ಆತಂಕದಲ್ಲಿ ಕುಟುಂಬಸ್ಥರು ತಕ್ಷಣವೇ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಅವರು ತಮ್ಮ ಲೆಗೇಜ್​ನೊಂದಿಗೆ ರೈಲ್ವೆ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ಬಂದರು. ಅದೃಷ್ಟವಶಾತ್, ಹುಡುಗನಿಗೆ ಗಂಭೀರವಾದ ಗಾಯವಾಗಿಲ್ಲ ಮತ್ತು ನಾವು ಅವನಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದರು. ನಾರಾಯಣ ನೇತ್ರಾಲಯದಲ್ಲಿ ಈ ವರ್ಷ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಕ್ರಮವಾಗಿ 28 ಮತ್ತು ಮೂರು ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆಯಲ್ಲಿ ಕಂಡುಬರುವ 24 ಪ್ರಕರಣಗಳಲ್ಲಿ 13 ಪ್ರಕರಣಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಂದು ಡಾ. ಶೆಟ್ಟಿ ಹೇಳಿದರು.

ವಿಡಿಯೋ ನೋಡಿ: ಬೆಳಕಿನ ಹಬ್ಬ ಹೆದರಿಸವ ಹಬ್ಬವಾಗದರಿಲಿ! Janashakthi Media

Donate Janashakthi Media

Leave a Reply

Your email address will not be published. Required fields are marked *