ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಆರೋಪಿಯ ಬಂಧನವಾಗಿದೆ ಎಂದು ಪೋಲೀಸರು ಹೇಳಿದ್ದಾರೆ.
ಇದನ್ನೂ ಓದಿ : ವಿಡಿಯೋದಲ್ಲಿರೋದು ನಾನೇ, ಸತ್ಯ ಬಾಯ್ಬಿಟ್ಟ ರಮೇಶ್ ಜಾರಕಿಹೊಳಿ
ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನಲಾಗಿ ಇದನ್ನು ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಈ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು. ಸಧ್ಯ ಇಡೀ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.
ಈ ಹಿಂದೆ ವಿಚಾರಣೆಗೆ ಕರೆದಾಗ ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ. ಸೋಂಕು ಗುಣಮುಖವಾದ ಬಳಿಕ ಸಿಸಿಬಿ ಪೊಲೀಸರು ಈಗ ಬಾಬುವನ್ನು ಬಂಧಿಸಿದ್ದಾರೆ.