ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ : ಹೆಚ್ಚಳ ಮಾಡಲಾಗಿದ್ದ ಶೇ 22 ರಷ್ಟು ಟೋಲ್‌ ದರದ ಆದೇಶ ವಾಪಸ್‌

ಮೈಸೂರು : ಬೆಂಗಳೂರು – ಮೈಸೂರು ಎಕ್ಸ್‌ ಪ್ರೆಸ್‌ ವೇ ಟೋಲ್‌ ದರ ಹೆಚ್ಚಳವನ್ನು ತಡೆಹಿಡಿಯಲಾಗಿದೆ.ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ಸೋಷಿಯಲ್‌ ಮೀಡಿಯಾ ಮೂಲಕ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ ನೀಡಿದ್ದಾರೆ.ಇಂದಿನಿಂದ ಬೆಂಗಳೂರು – ಮೈಸೂರು ಎಕ್ಸ್‌ ಪ್ರೆಸ್‌ ವೇ ಟೋಲ್‌ ದರವನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿತ್ತು.ಆದರೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತನ್ನ ಆದೇಶವನ್ನ ವಾಪಸ್‌ ಪಡೆದಿದೆ.

ಈ ವಿಡಿಯೋ ಬಗ್ಗೆ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದ ಸಂಸದ ಪ್ರತಾಪ್‌ ಸಿಂಹ ಮಾರ್ಚ್‌ 14 ನೇ ತಾರೀಖು ಟೋಲ್‌ ದರ ಹೆಚ್ಚಳ ಮಾಡಿದಾಗ ಬೆಂಗಳೂರಿನಿಂದ ನಿಡಘಟ್ಟ 135 ರೂಪಾಯಿ ಟೋಲ್‌ ಧರ ನಿಗಧಿ ಪಡಿಸಿದ್ದು,ಅದನ್ನು ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ 165 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.ಇಡೀ ದೇಶಾದ್ಯಂತ ಇರುವ ಎಲ್ಲಾ ಟೋಲ್‌ ರಸ್ತೆಗಳಲ್ಲಿ ಶೇ.7 ರಿಂದ ಒಂದಷ್ಟು ನಿಖರ ಬೆಲೆಯವರೆಗೆ ಹೆಚ್ಚಳ ಮಾಡಲಾಗಿದೆ.ಇದು ಕೇವಲ ಮೈಸೂರು – ಬೆಂಗಳೂರು ಎಕ್ಸ್‌ ಪ್ರೆಸ್‌ವೇ ಗೆ ಮಾತ್ರ ಅನ್ವಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.ಆದರೆ ಮೈಸೂರು-ಬೆಂಗಳೂರು ಎಕ್ಸ್‌ ಪ್ರೆಸ್‌ವೇ ನಲ್ಲಿ ಇನ್ನೂ ಕೆಲವು ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ಎಕ್ಸ್‌ ಪ್ರೆಸ್‌ವೇಗೆ ಟೋಲ್‌ ದರ ಹೆಚ್ಚಳವಾಗುವುದು ಬೇಡ,ತಾತ್ಕಾಲಿಕವಾಗಿ ತಡೆಹಿಡಿಯಿರಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೆ ಎಂದಿದ್ದರು.

ಇದನ್ನೂ ಓದಿ : ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ : ನಾಳೆಯಿಂದ ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ

ಹೆಚ್ಚಳ ಮಾಡಲಾಗಿದ್ದ ಟೋಲ್ ದರವೆಷ್ಟು ?

ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).

ಲಘು ವಾಹನಗಳು/ಮಿನಿ ಬಸ್: ಏಕಮುಖ ಸಂಚಾರ 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)

ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ: ಏಕಮುಖ ಸಂಚಾರ 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)

ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)

ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್/4-6 ಆಕ್ಸೆಲ್ ವಾಹನಗಳು: ಏಕಮುಖ ಸಂಚಾರ 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)

7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: ಏಕಮುಖ ಸಂಚಾರ 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)

Donate Janashakthi Media

Leave a Reply

Your email address will not be published. Required fields are marked *