ಮಹಿಳಾ ಸುರಕ್ಷತೆಯಲ್ಲಿ ಮತ್ತೆ ಕಳವಳ | ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ

ಬೆಂಗಳೂರು: ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ತಡೆಯಲು ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ದೇಶದ ಮಹಾನಗರಗಳ ಪಟ್ಟಿಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ ಎಂಬುದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) 2024ರ ವರದಿಯಲ್ಲಿ ಬಹಿರಂಗವಾಗಿದೆ. ಮಹಿಳಾ

ದೇಶದ 19 ಮಹಾನಗರಗಳ ಪೈಕಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಮುಂಬೈ ಎರಡನೇ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ 2024ರಲ್ಲಿ ಒಟ್ಟು 4,748 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ಈ ಸಂಖ್ಯೆ 4,870 ಆಗಿತ್ತು. ಒಟ್ಟಾರೆ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದರೂ, ಮಹಿಳೆಯರ ಸುರಕ್ಷತೆ ಕುರಿತು ಆತಂಕ ಮುಂದುವರಿದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತ್ಯಾಚಾರ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ 168 ಪ್ರಕರಣಗಳು ದಾಖಲಾಗಿದ್ದು, ಹಿಂದಿನ ವರ್ಷದಿಗಿಂತ ಕೇವಲ ಒಂದು ಪ್ರಕರಣ ಮಾತ್ರ ಕಡಿಮೆಯಾಗಿದೆ. ಲೈಂಗಿಕ ಕಿರುಕುಳ ಪ್ರಕರಣಗಳು 210ರಿಂದ 180ಕ್ಕೆ ಇಳಿಕೆಯಾದರೂ, ಮಹಿಳೆಯರ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ ಪ್ರಕರಣಗಳಲ್ಲಿ ನಗರ ಮೊದಲ ಸ್ಥಾನದಲ್ಲಿದೆ. ಈ ವಿಭಾಗದಲ್ಲಿ 897 ಪ್ರಕರಣಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ಮುರಶಿದಾಬಾದ್‌ನಲ್ಲಿ ಧ್ವಂಸಗೊಂಡ ಲೆನಿನ್ ಪ್ರತಿಮೆ ಮರುಸ್ಥಾಪನೆ

ಮಹಿಳೆಯರನ್ನು ವಿವಸ್ತ್ರಗೊಳಿಸಲು ಯತ್ನಿಸಿದ ಪ್ರಕರಣಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದ್ದು, 66 ಪ್ರಕರಣಗಳು ದಾಖಲಾಗಿವೆ. ವರದಕ್ಷಿಣೆ ಸಾವು ಪ್ರಕರಣಗಳಲ್ಲಿ 25 ಪ್ರಕರಣಗಳೊಂದಿಗೆ ಬೆಂಗಳೂರು ಮತ್ತು ಜೈಪುರ ನಾಲ್ಕನೇ ಸ್ಥಾನದಲ್ಲಿವೆ.

ಎನ್‌ಸಿಆರ್‌ಬಿ ವರದಿ ಪ್ರಕಾರ, ಮಹಾನಗರಗಳಲ್ಲಿ ದಾಖಲಾಗಿರುವ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಪತಿ ಅಥವಾ ಸಂಬಂಧಿಕರಿಂದ ನಡೆಯುವ ಕ್ರೌರ್ಯ ಪ್ರಕರಣಗಳೇ ಹೆಚ್ಚಾಗಿವೆ. ಬಳಿಕ ಅಪಹರಣ ಮತ್ತು ಕಿಡ್ನಾಪ್ ಪ್ರಕರಣಗಳು ಪ್ರಮುಖವಾಗಿವೆ.

ವಿಡಿಯೋ ನೋಡಿ : ದು.ಸರಸ್ವತಿಯವರ ಹೋರಾಟದ ಯಶೋಗಾಥೆ Janashakthi Media

Donate Janashakthi Media

Leave a Reply

Your email address will not be published. Required fields are marked *