ಬೆಂಗಳೂರು: ನಗರದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸ್ ಉಪನಿರೀಕ್ಷಕನನ್ನು ಜೂನ್ 29ರ ಸಂಜೆ ಬಂಧಿಸಲಾಗಿದೆ. ಬಂಧಿತ ಪಿಎಸ್ಐ ಪ್ರವೀಣ್, ಉತ್ತರ-ಪೂರ್ವ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ಸಂಬಂಧಪಟ್ಟವನಾಗಿದ್ದಾನೆ.
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಕೆಲ ತಿಂಗಳ ಹಿಂದೆ ಅಮೃತಹಳ್ಳಿಯಲ್ಲಿ ನಡೆದಿದ್ದ ಹತ್ಯೆ ಪ್ರಕರಣದ ಸಂಬಂಧವಾಗಿ ಕೆಲವು ಅಪ್ರಾಪ್ತ ಬಾಲಕರನ್ನು ಪ್ರವೀಣ್ ವಶಕ್ಕೆ ಪಡೆದಿದ್ದನು.
ಇದನ್ನೂ ಓದಿ: “ಅರ್ಹ ಮತದಾರರನ್ನು ಕೈಬಿಡಲು ಆಯೋಗಕ್ಕೆ ಅಧಿಕಾರವಿಲ್ಲ” – ಎಸ್ಐಆರ್ ವಿರುದ್ಧ ಸಿದ್ದರಾಮಯ್ಯ ಕಿಡಿ
ಬಾಲಕರನ್ನು ಖಾಸಗಿ ಸ್ಥಳಕ್ಕೆ ಕರೆದೊಯ್ದು, ಬೆಲ್ಟ್ನಿಂದ ಹೊಡೆದು, ಬಟ್ಟೆ ತೆಗೆಸಿದನೆಂದು ಮೂಲಗಳು ತಿಳಿಸಿವೆ. ಅಲ್ಲದೇ, ಅವರನ್ನು ಅಶ್ಲೀಲ ಕೃತ್ಯಗಳಲ್ಲಿ ತೊಡಗುವಂತೆ ಬಲವಂತಪಡಿಸಿ, ಅದನ್ನು ತನ್ನ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಈ ವಿಡಿಯೋ ಇತ್ತೀಚೆಗೆ ಸೋರಿಕೆಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನೆಲೆ, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, 2012ರ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಕೋತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಫ್ಐಆರ್ ಆಧಾರದಲ್ಲಿ, ಕೋತನೂರು ಪೊಲೀಸರು ಸೋಮವಾರ ಸಂಜೆ ಪ್ರವೀಣ್ ಅನ್ನು ಬಂಧಿಸಿ, ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ನೋಡಿ: ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ‘ವಿಐಪಿ’! ಪಾಸ್ಪೋರ್ಟ್ ಕಥೆ ಏನು? ಎಸ್ಐಆರ್ ಸುತ್ತ ಪ್ರಶ್ನೆಗಳ ಹುತ್ತ |
