ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪೂರ್ವ ಸಂಚಾರ ವಿಭಾಗದ ಪೊಲೀಸರು ನಿನ್ನೆ ವಿಶೇಷ ಕಾರ್ಯಾಚರಣೆ ನಡೆಸಿ 909 ಪ್ರಕರಣಗಳನ್ನು ದಾಖಲಿಸಿಕೊಂಡು 4.54 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಆಗಸ್ಟ್ 08ರ ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯಾಚರಣೆ ನಡೆಸಿ ಪ್ರಯಾಣಿಕ ರಿಂದ ದಂಡ ಸಂಗ್ರಹಿಸಿದ್ದಾರೆ. ಕರ್ಕಶ ಶಬ್ದ, ಸಿಗ್ನಲ್ ಜಂಪ್, ರಾಂಗ್ ಪಾರ್ಕಿಂಗ್, ಪಾರ್ಕಿಂಗ್, ಒಂದೇ ಬೈಕ್‍ನಲ್ಲಿ ಮೂವರ ಸಂಚಾರ, ಚಾಲನೆ ವೇಳೆ ಮೊಬೈಲ್ ಬಳಕೆ, ಸೀಟ್ ಬೆಲ್ಟ್ ಹಾಕದಿರುವುದೂ ಸೇರಿದಂತೆ ಇನ್ನಿತರ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಚಾಲಕರು ಹಾಗೂ ಸವಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
ವಾಹನ ಚಾಲಕರು ಹಾಗೂ ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್.ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.