ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಬಂಧನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ. ಮೈಲಾರಪ್ಪ ನನ್ನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮೈಲಾರಪ್ಪ 2022ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ದೂರುದಾರೆಯಾದ ಮಹಿಳೆ ಅವರೊಂದಿಗೆ ಕೆಲಸ ಮಾಡುತ್ತಿದ್ದರು. ಪರಿಚಯದ ಸಮಯದಲ್ಲೇ ಮೈಲಾರಪ್ಪರಿಂದ ಲೈಂಗಿಕ ಕಿರುಕುಳ ಆರಂಭವಾಗಿತ್ತು ಎಂದು ಮಹಿಳೆ ಆರೋಪಿಸಿದ್ದಾರೆ.

ಇದನ್ನೂ ಓದಿ: ನವೀಕರಣ ಹೆಸರಿನಲ್ಲಿ ಭ್ರಷ್ಟಾಚಾರ: ಸ್ಪೀಕರ್ ಖಾದರ್ ಪ್ರತಿಕ್ರಿಯೆ

ದೂರಿನ ಪ್ರಕಾರ, ಈ ಕಿರುಕುಳ 2022ರಿಂದ 2024ರವರೆಗೆ ಮುಂದುವರಿದಿತ್ತು. ಮಹಿಳೆ ಮೊದಲು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ, ಮೈಲಾರಪ್ಪ ಅವರು ತಮ್ಮ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದು, ಮಹಿಳೆಗೆ ಬೆದರಿಕೆ ನೀಡುತ್ತಿದ್ದಾರೆ ಎಂಬ ಹೊಸ ದೂರು ದಾಖಲಾಗಿದೆ.

ಮೈಲಾರಪ್ಪ ಮಹಿಳೆಯ ಮನೆಯನ್ನು ತಮ್ಮ ಹೆಸರಿಗೆ ಬರೆಯುವಂತೆ ಒತ್ತಾಯಿಸಿ, ಇದಕ್ಕೆ ಒಪ್ಪದಿದ್ದರೆ “ತೀವ್ರ ಪರಿಣಾಮಗಳು ಎದುರಾಗಲಿವೆ” ಎಂದು ಬೆದರಿಕೆ ಹಾಕಿದ್ದರು. ಈ ಕಾರಣದಿಂದ ಮಹಿಳೆ ಭಯಗೊಂಡು ಬಸವೇಶ್ವರ ನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡು ಮೈಲಾರಪ್ಪನವರನ್ನು ಬಂಧಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು | ಕ್ಲೈಮ್ಯಾಕ್ಸ್‌ನತ್ತ SIT ತನಿಖೆ ; ಫಲಿತಾಂಶಕ್ಕಾಗಿ ಕಾಯೋಣ Janashakthi Media

Donate Janashakthi Media

Leave a Reply

Your email address will not be published. Required fields are marked *