ಬೆಸ್ಕಾಂ ಸಹಾಯವಾಣಿ: ಮಳೆ ಅನಾಹುತದಿಂದ ಬಹಳ ಹೊತ್ತು ಕರೆಂಟ್‌ ಕೈಕೊಟ್ಟಿರೆ? ವಾಟ್ಸಾಪ್‌ ದೂರು ಕೊಡಿ

ಬೆಂಗಳೂರು: ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂ

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಪರಿಸರ ಕಾಳಜಿ-ಮನುಜ ಪ್ರಜ್ಞೆ ಮತ್ತು ಸಮಾಜ ಬೆಸ್ಕಾಂ

ವಾಟ್ಸ್‌ಪ್‌ ಸಹಾಯವಾಣಿ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014,

ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್‌ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ನೋಡಿ : ಹೊಟ್ಟೆಗೆ ಹಿಟ್ಟಿಲ್ಲದ ಭಾರತವೂ, ಆರ್ಥಿಕವಾಗಿ 4ನೆ ಸ್ಥಾನ ಎನ್ನುವ ಜುಟ್ಟಿಗೆ ಮಲ್ಲಿಗೆ ಹೂವೂ.. Janashakthi Media

 

Donate Janashakthi Media

Leave a Reply

Your email address will not be published. Required fields are marked *