ಬೆಂಗಳೂರು: ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಇದ್ದೂ, ಅವರಿಗೂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಯಾವುದೇ ರೀತಿಯಾಗಿ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀರ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.
ಇಂದು ಬೆಂಗಳೂರಿಗೆ ಭಾರತ ಜೋಡೋ ಭವನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶದ ಒಂದು ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದಾರೆ.
ಇದನ್ನೂ ಓದಿ: ದುಬೈ ಕಾರ್ ರೇಸ್ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ ತಮಿಳು ನಟ ಅಜಿತ್
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಕೆಲ ಸೆಲೆಕ್ಟೆಡ್ ಗ್ರೂಪ್ ಆಫ್ ಮೀಡಿಯಾದಿಂದ ಇತರ ಗೊಂದಲ ಸೃಷ್ಟಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲ ಹೇಳಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಆರೋಪಿಸುತ್ತಿದ್ದಾರೆ. ಸರ್ಕಾರದಲ್ಲಿ ಅಧಿಕಾರ ಬದಲಾವಣೆ, ಹೊಸ ನೇಮಕ ಯಾವುದು ಇಲ್ಲ ಎಂದರು.
ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ್ ಬಣ ಒಂದು ಕಡೆಯಾದರೆ, ಆರ್ ಅಶೋಕ್ ಮತ್ತು ಅಶ್ವಥ್ ನಾರಾಯಣ ಬಣ ಮತ್ತೊಂದು ಕಡೆಯಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬಣ ಮತ್ತೊಂದು ಕಡೆಯಾಗಿದೆ. ಆಂತರಿಕ ನಾಯಕತ್ವಕ್ಕಾಗಿ ಬಿಜೆಪಿ ಜೆಡಿಎಸ್ ನಡುವೆ ಗುದ್ದಾಟವಿದೆ ಎಂದು ತಿಳಿಸಿದರು.
ಇದನ್ನೂ ನೋಡಿ: ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ: ಮಂಡ್ಯದಲ್ಲಿ ಕೃಷಿ ಸಚಿವರ ಕಚೇರಿ ಎದುರು ಭತ್ತ ಸುರಿದು ಪ್ರತಿಭಟನೆ