ಚಂಡೀಗಢ: ಪಂಜಾಬ್ ರಾಜ್ಯದಲ್ಲಿ ಜುಲೈ 1 ರಿಂದ ಗೃಹ ಬಳಕೆಗಾಗಿ ಉಚಿತ 300 ಯೂನಿಟ್ ವಿದ್ಯುತ್ ಪೂರೈಕೆ ಮಾಡುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಘೋಷಣೆ ಮಾಡಿದೆ. ಮುಖ್ಯಮಂತ್ರಿ ಭಗವಂತ ಮಾನ್ ಅಧಿಕಾರ ವಹಿಸಿಕೊಂಡ ಒಂದು ತಿಂಗಳಲ್ಲೇ ಪಂಜಾಬ್ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ.
ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದು 30 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಮೊದಲ ಯೋಜನೆಯನ್ನು ಪ್ರಕಟಿಸಿದೆ. ಚುನಾವಣೆಯಲ್ಲಿ ಎಎಪಿ ನೀಡಿದ್ದ ಪ್ರಮುಖ ಆಶ್ವಾಸನೆಗಳಲ್ಲಿ ಉಚಿತ ವಿದ್ಯುತ್ ಕೂಡ ಒಂದಾಗಿತ್ತು.
ಇದನ್ನು ಓದಿ: ಪಂಜಾಬ್: ರಾಜ್ಯಪಾಲರನ್ನು ಭೇಟಿ ಮಾಡಿದ ಭಗವಂತ್ ಮಾನ್
ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಪಂಜಾಬ್‌ನಲ್ಲಿ ಕಳೆದ ತಿಂಗಳು ಮುಕ್ತಾಯವಾದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿತ್ತು. ಇದೀಗ ತಮ್ಮ ಮೊದಲ ಭರವಸೆ ಈಡೇರಿಸಲು ಮುಂದಾಗಿದ್ದಾರೆ.
ಕಳೆದ ಗುರುವಾರ ಜಲಂಧರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಗವಂತ್ ಮಾನ್ ಇನ್ನೆರಡು ದಿನದಲ್ಲಿ ಪಂಜಾಬ್ ಜನತೆಗೆ ಉತ್ತಮ ಸುದ್ದಿ ನೀಡಲಿದ್ದೇವೆ ಎಂದಿದ್ದರು. ಪಂಜಾಬ್‌ನಲ್ಲಿ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಕುರಿತು ಚರ್ಚಿಸಲು ಮಾನ್ ಏಪ್ರಿಲ್ 12ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.
ಇದನ್ನು ಓದಿ: ಅಸೆಂಬ್ಲಿ ಚುನಾವಣೆಗಳ ಫಲಿತಾಂಶ ಹೇಳುವುದೇನು?
ಈ ಬಗ್ಗೆ ಇಂದು ಬಹುತೇಕ ಎಲ್ಲಾ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಎಎಪಿ ಸರ್ಕಾರ ಜಾಹೀರಾತು ನೀಡಿದ್ದು, ಉಚಿತ ವಿದ್ಯುತ್ ಘೋಷಿಸಲಾಗಿದೆ, ಇದರ ಜೊತೆಗೆ ಭ್ರಷ್ಟಚಾರ ವಿರೋಧಿ ಸಹಾಯವಾಣಿಯನ್ನು ಜಾಹೀರಾತಿನಲ್ಲಿ ತೋರಿಸಲಾಗಿದೆ. ಕಳೆದ ತಿಂಗಳು ಮುಖ್ಯಮಂತ್ರಿ ಭಗವಂತ ಮಾನ್ “ಮನೆ ಬಾಗಿಲಿಗೆ ಪಡಿತರ ಯೋಜನೆ”ಯನ್ನ ಜಾರಿಗೆ ತಂದಿದ್ದರು. ಇದು ಕೂಡ ತಾವು ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಪ್ರಮುಖ ಭರವಸೆಯಲ್ಲಿ ಒಂದಾಗಿದೆ.