ಭಾರತ್ ಜೋಡೋ ನ್ಯಾಯ್ ಯಾತ್ರೆ | ರಾಹುಲ್ ಗಾಂಧಿಗೆ ಗುವಾಹಟಿ ಪ್ರವೇಶ ನಿರಾಕರಿಸಿದ ಬಿಜೆಪಿ ಸರ್ಕಾರ!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಗುವಾಹಟಿ ನಗರಕ್ಕೆ ಪ್ರವೇಶಿಲು ಬಿಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಗುವಾಹಟಿಯಲ್ಲಿ ಮಂಗಳವಾರ ಘರ್ಷಣೆ ನಡೆಸಿದ್ದಾರೆ. ಹಿಮಂತ ಬಿಸ್ವಾ ಶರ್ಮಾ ಅವರು ಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತದೆ ಎಂಬ ಕಾರಣಕ್ಕೆ ನಗರಕ್ಕೆ ಪ್ರವೇಶ ನಿರಾಕರಿಸಿದ್ದರು.

ರಾಹುಲ್ ಗಾಂಧಿ ಅವರು ನಗರ ಪ್ರವೇಶಿಸದಂತೆ ಪೊಲೀಸರು ಎರಡು ಕಡೆ ಬ್ಯಾರಿಕೇಡ್ ಅಳವಡಿಸಿದ್ದರು. ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಅಸ್ಸಾಂ ಸಿಎಂ, ಕೇಂದ್ರ ಗೃಹ ಸಚಿವರು ಮತ್ತು ಪ್ರಧಾನಿ ನಿಯಮಗಳನ್ನು ಮುರಿಯಬಹುದು. ಆದರೆ ನಾವು (ಕಾಂಗ್ರೆಸ್) ಎಂದಿಗೂ ಅಂತಹ ಕೆಲಸವನ್ನು ಮಾಡುವುದಿಲ್ಲ. ಆದಾಗ್ಯೂ, ನಾವು ದುರ್ಬಲರು ಎಂದು ಇದರ ಅರ್ಥವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದ ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರ ಭಾರತ ರತ್ನ!

“ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರಾಕರಿಸಿದ ಮಾರ್ಗದಲ್ಲಿಯೇ ಹೋಗಲು ಅವಕಾಶ ಮಾಡಿಕೊಡಲಾಗಿದೆ. ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಆದೇಶಗಳನ್ನು ಅನುಸರಿಸಿದ್ದಾರೆ ಎಂದು ನಮಗೆ ತಿಳಿದಿದೆ. ಒಬ್ಬ ವ್ಯಕ್ತಿ ಬಸ್‌ನ ಮುಂದೆ ಬಂದು ಮಲಗಿದ್ದಾರೆ. ನಾವು ನಿಮ್ಮ ವಿರುದ್ಧ ಅಲ್ಲ. ನಮ್ಮ ಹೋರಾಟ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯ ವಿರುದ್ಧ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಶಿ ಮಥುರಾ ಬಾಕಿ ಹೈ’ | ಬೆಂಗಳೂರು – ರಾಜಧಾನಿಯ ಬೀದಿಗಳಲ್ಲಿ ಮಸೀದಿ ಒಡೆಯುವ ದ್ವೇಷದ ಕೂಗು

ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ಮಾತನಾಡಲು ಅವಕಾಶ ನೀಡಬೇಡಿ ಎಂದು ಭಾರತದ ಗೃಹ ಸಚಿವಾಲಯವು ಅಸ್ಸಾಂ ಮುಖ್ಯಮಂತ್ರಿಗೆ ಹೇಳಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನೀವು ಏನು ಕಷ್ಟ ಎದುರಿಸುತ್ತಿರುವಿರಿ ಎಂಬುದನ್ನು ಅರ್ಥಮಾಡಿಕೊಳ್ಳಲು, ನಾನು ನಿಮ್ಮ ವಿಶ್ವವಿದ್ಯಾನಿಲಯಕ್ಕೆ ಬಂದು ನಿಮ್ಮೊಂದಿಗೆ ಮಾತನಾಡಲು ಬಯಸುತ್ತೇನೆ. ನಿಮಗೆ ಸಹಾಯ ಮಾಡಬಹುದಾಗಿದ್ದರೆ ನನ್ನದೇ ಆದ ರೀತಿಯಲ್ಲಿ ಪ್ರಯತ್ನಿಸಲು ಬಯಸುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರಾಹುಲ್ ಗಾಂಧಿ ಬರುತ್ತಾರೋ, ಬರುದಿಲ್ಲವೊ ಎನ್ನುವುದು ಮುಖ್ಯವಲ್ಲ. ನೀವು ಕೇಳಲು ಬಯಸುವ ಯಾರ ಮಾತನ್ನಾದರೂ ಕೇಳಲು ನಿಮಗೆ ಹಕ್ಕಿದೆ ಎಂಬುದು ಮುಖ್ಯವಾದುದು. ಇದು ಅಸ್ಸಾಂನಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ವಿಶ್ವವಿದ್ಯಾಲಯ, ಕಾಲೇಜು ಅಥವಾ ಶಾಲೆಗಳಲ್ಲಿ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮ್‌ ಕೆ ನಾಮ್ ಸಾಕ್ಷ್ಯಚಿತ್ರ ಪ್ರದರ್ಶನ ವಿವಾದ | ಕೇರಳದಾದ್ಯಂತ ಪ್ರದರ್ಶಿಸುತ್ತೇವೆ; ನಮ್ಮ ಧ್ವಜ ಕಾವಲು ನಿಲ್ಲುತ್ತದೆ! ಧೈರ್ಯವಿರುವ ಆರೆಸ್ಸೆಸ್ ಪ್ರಚಾರಕನಿಗೆ ಸ್ವಾಗತ ಎಂದ ಡಿವೈಎಫ್‌ಐ!

ಈ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ “ಜನಸಮೂಹವನ್ನು ಪ್ರಚೋದಿಸಿದ” ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಪೊಲೀಸ್ ದೂರು ದಾಖಲಿಸುವಂತೆ ರಾಜ್ಯ ಡಿಜಿಪಿಗೆ ಸೂಚಿಸಿದ್ದಾರೆ. “ರಾಹುಲ್ ಗಾಂಧಿ ಅವರ ಅಶಿಸ್ತಿನ ನಡವಳಿಕೆ ಮತ್ತು ಒಪ್ಪಿತ ಮಾರ್ಗಸೂಚಿಗಳ ಉಲ್ಲಂಘನೆಯಿಂದ ಗುವಾಹಟಿಯಲ್ಲಿ ಭಾರಿ ಟ್ರಾಫಿಕ್ ಜಾಮ್‌ ಉಂಟಾಗಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇವೆಲ್ಲಾ ಅಸ್ಸಾಮಿ ಸಂಸ್ಕೃತಿಯ ಭಾಗವಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ ನಕ್ಸಲೈಟ್ ತಂತ್ರಗಳು ನಮ್ಮ ಸಂಸ್ಕೃತಿಗೆ ಸಂಪೂರ್ಣವಾಗಿ ಅನ್ಯವಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ದೃಶ್ಯಗಳನ್ನು ಸಾಕ್ಷಿಯಾಗಿ ಬಳಸಲಾಗುವುದು” ಎಂದು ಹಿಮಾಂತ ಶರ್ಮಾ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಬರೆದಿದ್ದಾರೆ.

ವಿಡಿಯೊ ನೋಡಿ: ಸಂಸದರ ಕಛೇರಿ ಮುಂದೆ ಕಾರ್ಮಿಕರ ಪ್ರತಿಭಟನೆ : ಅಸಂಘಟಿತ ಕಾರ್ಮಿಕರಿಗೆ ಅಚ್ಚೆದಿನ್‌ ಯಾವಾಗ?

Donate Janashakthi Media

Leave a Reply

Your email address will not be published. Required fields are marked *