ಅತ್ಯಲ್ಪ ಮೊತ್ತಕ್ಕೆ ಕುಸಿದ ಭಾರತ: ಗೆಲುವಿನ‌ ಓಟದಲ್ಲಿ ಆಸ್ಟ್ರೇಲಿಯಾ

ಅಡಿಲೇಡ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ಗೆಲ್ಲುವ ಮೂಲಕ ಭಾರತದ ಗೆಲುವಿನ ಕನಸಿಗೆ ತಣ್ಣೀರು ಎರಚಿದೆ. ಎಕದಿನ ಪಂದ್ಯದಲ್ಲಿ ಹೀನಾಯ ಸೋಲುಂಡಿದ್ದ ಭಾರತ ಟೆಸ್ಟ್ ಪಂದ್ಯದಲ್ಲಿ ಗೆಲ್ಲಬಹುದು ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ನಿರೀಕ್ಷೆಯಲ್ಲಿದ್ದರು.

ಭಾರತ ತಂಡ ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಅವಮಾನಕರ ಮೊತ್ತಕ್ಕೆ ಆಲ್​​ಔಟ್​​ ಆಗಿದೆ. ಅತ್ಯಲ್ಪ ಮೊತ್ತಕ್ಕೆ ಭಾರತ ತನ್ನೆಲ್ಲ ವಿಕೇಟ್ ಕಳೆದುಕೊಂಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಪ್ರಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನಿನ್ನೆ ಎರಡನೇ ಇನ್ನಿಂಗ್ಸ್ ಆರಂಭಿಸಿ 1 ವಿಕೆಟ್​​​​ ನಷ್ಟಕ್ಕೆ 9 ರನ್ ಗಳಿಸಿದ್ದ ಭಾರತ, 3ನೇ ದಿನದ ಆರಂಭದಲ್ಲಿ 36 ರನ್​​ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಒಬ್ಬ ಆಟಗಾರನೂ ಎರಡಂಕಿ ದಾಟದೇ ಔಟಾಗಿ ಪೆವಿಲಿಯನ್ ಸೇರಿದ್ದಾರೆ. ಮೊದಲ ಇನ್ನಿಂಗ್ಸ್​​​ನಲ್ಲಿ ಭಾರತ 244 ರನ್​ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್​ ಮಾಡಿದ ಆಸ್ಟ್ರೇಲಿಯಾ 191 ರನ್​ಗೆ ಆಲೌಟ್​ ಆಗಿತ್ತು. 53 ರನ್ ಮುನ್ನಡೆ ಪಡೆದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 36 ರನ್​​​​​​ಗೆ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾಗೆ 90 ರನ್ ಟಾರ್ಗೆಟ್ ನೀಡಿತ್ತು. ಸುಲಭದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಎಂಟು ವಿಕೇಟ್ ಗಳಿಂದ ಜಯಗಳಿಸಿದೆ. ಎರಡನೆಯ ಪಂದ್ಯ ಡಿಸೆಂಬರ್ 26 ಕ್ಕೆ ನಡೆಯಲಿದೆ. ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯ 1-0 ಮುನ್ನಡೆ ಕಾಯ್ದುಕೊಂಡಿದೆ.

Donate Janashakthi Media

Leave a Reply

Your email address will not be published. Required fields are marked *