ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆಯ ಭಾಗವಾಗಿ ನಡೆಸಲಾಗುತ್ತಿರುವ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ದೆಹಲಿ – ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರೈತನೊಬ್ಬ ಮೃತಪಟ್ಟಿದ್ದಾನೆ.
ಇದನ್ನು ಓದಿ: ಭಾರತ್ ಬಂದ್ ರಾಜ್ಯದ ಹಲವೆಡೆ ಪ್ರತಿಭಟನೆಯ ಬಿಸಿ: ಕೇಂದ್ರದ ವಿರುದ್ಧ ಮೊಳಗಿದ ರಣಕಹಳೆ
ಕೃಷಿ ಕಾನೂನುಗಳು ಜಾರಿಯಾಗಿ ಇವತ್ತಿಗೆ 1 ವರ್ಷ ಕಳೆದಿದೆ. ಈ ಹಿನ್ನೆಲೆ ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿತ್ತು. ಸಿಂಘು ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು, ದಿಲ್ಲಿ-ಹರಿಯಾಣ ಹೆದ್ದಾರಿಯಲ್ಲಿ 14 ಪ್ರವೇಶ ಮತ್ತು ನಿರ್ಗಮನದ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಹೃದಯಾಘಾತದಿಂದ ರೈತ ಸಾವನ್ನಪ್ಪಿರುವ ಸಾಧ್ಯತೆ ಇದೆ ದೆಹಲಿ ಪೊಲೀಸರು ಹೇಳಿಕೆ ನೀಡಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ. ಮೃತ ರೈತನ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರೈತರ ಬಂದ್ ಆಚರಣೆ ಹಿನ್ನೆಲೆ ದೆಹಲಿ ಗಡಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ದೆಹಲಿ ಪೊಲೀಸರು ಭದ್ರತೆಯನ್ನು ಕೈಗೊಂಡಿದ್ದರು.