ಶಿವಮೊಗ್ಗ ಜ 22: ಗುರುವಾರ ರಾತ್ರಿ ಸುಮಾರು 10.20ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಬಾರೀ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯವನ್ನು ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಭದ್ರಾ ಕಾಡ ಪ್ರಾಧಿಕಾರವು ಸುಮಾರು 12ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಭದ್ರಾ ಜಲಾಶಯವು ಸುಮಾರು 5ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯಾಜನೆಯಾಗಿರುತ್ತದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಪರಿಶೀಲನೆ ನಡೆಸಿದ್ದು, ಜಾಗೃತೆವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಪವಿತ್ರಾ ರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ನಿಗೂಢ ಸ್ಪೋಟ : 15 ಮಂದಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಈ ಕಂಪನ ಸಾಕಷ್ಟು ಸದ್ದು ಮಾಡಿದ್ದು ಅದು ಭೂಕಂಪನವಾ ಅಥವಾ ಜಲ್ ಕ್ರಶರ್ ಸ್ಪೋಟವಾ ಎಂದು ಅನುಮಾನ ವ್ಯಕ್ತವಾಗಿದೆ. ಸರಿಯಾದ ಮಾಹಿತಿ ತಿಳಿದು ಬಂದಿಲ್ಲ. ಕ್ರಶರ್ ಸ್ಪೋಟಕ್ಕೆ 16 ಜನ ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿದ್ದು ಆ ಪ್ರದೇಶದಲ್ಲಿ ಭದ್ರತೆ ಒದಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ವಿಡಿಯೋ ನೋಡಿ : ಶಿವಮೊಗ್ಗದಲ್ಲಿ ಬಾರೀ ಸ್ಪೋಟ 16 ಸಾವು