ಬೆಂಗಳೂರು: ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್ಡಿ ರೇವಣ್ಣ ರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು ಎನ್ನಲಾದ ಕೆಆರ್ ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿಯೊಬ್ಬರನ್ನು ಈಗಾಗಲೇ ಬಂಧಿಸಿದ್ದಾರೆ. ಇದು ಪ್ರಕರಣದ ಮೊದಲ ಬಂಧನವಾಗಿದೆ.
ಈ ಕುರಿತು ನಾಪತ್ತೆಯಾಗಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ರೇವಣ್ಣ ವಿರುದ್ಧ ಅಪಹರಣ ಆರೋಪದ ಮೇರೆಗೆ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.
ಇದನ್ನೂ ಓದಿ: ಅಧಿಕಾರಿಗಳಿಂದ ರೇವಣ್ಣ ನಿವಾಸದಲ್ಲಿ ಮಹಜರು
ಎಸ್ಐಟಿ ತಂಡಗಳು ಗುರುವಾರ ತಡರಾತ್ರಿಯಿಂದ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದೆ.
ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ರಿಗೂ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೊಳೆನರಸೀಪುರದಲ್ಲಿನ ರೇವಣ್ಣ ಅವರ ಮನೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಮತ್ತು ಮನೆಯಲ್ಲಿದ್ದ ಭವಾನಿ ರೇವಣ್ಣ ಜೊತೆ ಚರ್ಚೆ ನಡೆಸಿದ್ದಾರೆ.
ಇದನ್ನೂ ನೋಡಿ: ಹಾಸನ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಸುದ್ದಿಗೋಷ್ಠಿ