ಬೆಂಗಳೂರೂ: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಕೇಸ್ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ಆದೇಶ ಮೇ. 31ಕ್ಕೆ ಹೊರಬೀಳಲಿದೆ.
ಅಲ್ಲಿಯವರೆಗೆ ಜಾಮೀನು ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಯ್ದಿರಿಸಿದೆ. ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣ ಇದಾಗಿದ್ದು, ಅಪಹರಣದಲ್ಲಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂಬ ಆರೋಪದಡಿ ಅವರಿಗೂ ಎಸ್ಐಟಿ ನೊಟೀಸ್ ನೀಡಿತ್ತು.
ಇದನ್ನು ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ
ಪ್ರಕರಣದಲ್ಲಿ ಭವಾನಿ ಹೆಸರಾಗಲೀ, ನೇರ ಪಾತ್ರವೂ ಇಲ್ಲ ಎಂದು ವಕೀಲರು ವಾದ ಮಂಡಿಸಿದರು. ಅವರ ಕುರಿತಾಗಿ ಸಾಕಷ್ಟು ಸಾಕ್ಷಿಗಳಿವೆ ಎಂದು ಎಸ್ಐಟಿ ಎಸ್ಪಿಪಿ ಪ್ರತಿವಾದ ಮಂಡಿಸಿದೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಕುರಿತಾದ ಆದೇಶವನ್ನು ಕಾಯ್ದಿರಿಸಿದೆ.
ಇದನ್ನು ನೋಡಿ : ಪ್ರಜ್ವಲ್ ರೇವಣ್ಣ – ಲೈಂಗಿಕ ಹತ್ಯಾಕಾಂಡ ಆರೋಪಿJanashakthi Media